Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಮುಂದಿನ ಶೈಕ್ಷಣಿಕ ವರ್ಷದಿಂದ ದ್ವಿಭಾಷಾ...

ಮುಂದಿನ ಶೈಕ್ಷಣಿಕ ವರ್ಷದಿಂದ ದ್ವಿಭಾಷಾ ನೀತಿ ಜಾರಿ : ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ8 Nov 2026 12:36 AM IST
share
ಮುಂದಿನ ಶೈಕ್ಷಣಿಕ ವರ್ಷದಿಂದ ದ್ವಿಭಾಷಾ ನೀತಿ ಜಾರಿ : ಮಧು ಬಂಗಾರಪ್ಪ

ಚಿಕ್ಕಮಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ದ್ವಿಭಾಷಾ ಶಿಕ್ಷಣ ಜಾರಿಯಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಝೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ವ್ಯಾಪ್ತಿಯ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದದರು.

ಪೋಷಕರು ಇಂಗ್ಲೀಷ್ ಶಿಕ್ಷಣದ ಮಹತ್ವದಿಂದ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸುತ್ತಿದ್ದಾರೆ. ಸರಕಾರಿ ಶಾಳೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಮತ್ತು ಖಾಸಗಿ ಶಾಲೆಗಳತ್ತ ಪೋಷಕರು ಹೆಚ್ಚು ಆಕರ್ಷಿತರಾಗುವುದನ್ನು ಕಡಿಮೆ ಮಾಡುವ ಉದ್ದೇಶದಿಂದ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಎಲ್‌ಕೆಜಿ ಹಾಗೂ ಯುಕೆಜಿ ಶಿಕ್ಷಣ ಪ್ರಾರಂಭಿಸಲಾಗಿದೆ. ಇದರಿಂದ ಚಿಕ್ಕ ವಯಸ್ಸಿನಿಂದಲೇ ಸರಕಾರಿ ಶಿಕ್ಷಣ ವ್ಯವಸ್ಥೆಯತ್ತ ಮಕ್ಕಳನ್ನು ಕರೆತರಲು ಸಾದ್ಯವಾಗುತ್ತದೆ. ಈ ಕುರಿತು ಶಿಕ್ಷಕರು ಪೋಷಕರಿಗೆ ಮಾಹಿತಿ ಒದಗಿಸಿ ಸರಕಾರಿ ಶಾಳೆಗಳಿಗೆ ಮಕ್ಕಳನ್ನು ದಾಖಲಿಸುವಂತೆ ಪ್ರೇರೆಪಿಸಬೇಕು ಎಂದು ಹೇಳಿದರು.

ಪ್ರಸಕ್ತ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ದ್ವಿಭಾಷಾ ಶಿಕ್ಷಣ ಪದ್ದತಿಯು ಮಹತ್ವದ ಪಾತ್ರ ವಹಿಸುತ್ತಿದೆ. ಮಾತೃಭಾಷೆ ಜೊತೆಗೆ ಮತ್ತೊಂದು ಭಾಷೆಯಲ್ಲಿಯೂ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸುವ ಈ ಪದ್ಧತಿಯು ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ಸಂವಹನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಈ ಕುರಿತು ಪೋಷಕರೂ ಮಕ್ಕಳ ಭಾಷಾ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸಿಕೊಡಬೇಕು. ಶಿಕ್ಷಕರು ಹಾಗೂ ಅಧಿಕಾರಿಗಳು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ನಿರ್ದೇಶಿಸಿದರು.

ಮಕ್ಕಳಿಗೆ ಒದಗಿಸುತ್ತಿರುವ ಶೂಗಳ ಗುಣಮಟ್ಟವು ಉತ್ತಮ ಗುಣಮಟ್ಟದ್ದಾಗಿದೆ. ಗುಣಮಟ್ಟದಲ್ಲಿ ಕೊರತೆಯಿದಲ್ಲಿ ಶೀಘ್ರವಾಗಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು. ಅಳತೆಗಳಲ್ಲಿ ವ್ಯತ್ಯಾಸಗಳಿದ್ದರೆ ಬದಲಿ ಶೂಗಳನ್ನು ನೀಡಬೇಕು. ಶಾಲೆಗಳಲ್ಲಿ ಕುಡಿಯುವ ನೀರು ಸೇರಿದಂತೆ ಶಾಲಾ ಕೊಠಡಿಗಳು, ಉಪಕರಣಗಳು ಮತ್ತು ಶೌಚಾಲಯಗಳನ್ನು ದುಸ್ಥಿತಿಯಲ್ಲಿರಿಸಿ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸಿಕೊಡಬೇಕು ಎಂದು ಸೂಚಿಸಿದ ಸಚಿವರು, ಶಿಕ್ಷಕರಿಗೆ ಮೊಬೈಲ್ ಮೂಲಕ (ಮುಖ ಗುರುತಿಸುವ ತಂತ್ರಜ್ಞಾನ) ಹಾಜರಾತಿ ದಾಖಲಿಸಲು ಎದುರಗುತ್ತಿರುವ ಸಮಸ್ಯೆಗಳ ಕುರಿತು ಗಮನಿಸಲಾಗಿದೆ. ಈ ಕುರಿತು ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಲೆಗಳ ಅಭಿವೃದ್ಧಿಯಲ್ಲಿ ಸರಕಾರದೊಂದಿಗೆ ಸಾರ್ವಜನಿಕರ ಪಾತ್ರವು ಬಹುಮುಖ್ಯವಾಗಿದೆ. ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಎಂಬ ಘೋಷವಾಕ್ಯದೊಂದಿಗೆ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳನ್ನೊಳಗೊಂಡ ತಂಡ ರಚಿಸಿ ಶಾಲೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಿ ಉತ್ತಮ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕೆಂದು ಸಲಹೆ ನೀಡಿದರು.

ಗಣಿಗಾರಿಕೆ ಬಾಧಿತ ಪ್ರದೇಶಗಳು, ಕಲ್ಯಾಣ ಕರ್ನಾಟಕ ಭಾಗ ಹಾಗೂ ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಪ್ರದೇಶಗಳಲ್ಲಿ ಹೆಚ್ಚುವರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನ ಬಳಸಿಕೊಳ್ಳಲಾಗುತ್ತದೆ ಎಂದು ಹೇಳಿದರು.

ಸಿಎಸ್‌ಆರ್ ಅನುದಾನದಿಂದಲೂ ಶಾಲೆಗಳ ಅಭಿವೃದ್ಧಿ: ಸರಕಾರದ ಅನುದಾನದ ಜೊತೆಗೆ ಖಾಸಗಿ ಸಂಸ್ಥೆಗಳ ಸಿಎಸ್‌ಆರ್ ನಿಧಿಯನ್ನೂ ಬಳಸಿಕೊಂಡು ಸರಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ ಸುಮಾರು 208 ಕೋಟಿ ರೂ. ಮೊತ್ತದ ಸಿಎಸ್‌ಆರ್ ಸಹಕಾರದೊಂದಿಗೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ಒಂದು ವರ್ಷದೊಳಗೆ ಹೆಚ್ಚುವರಿಯಾಗಿ ಸುಮಾರು 1,000 ಕೋಟಿ ರೂ. ಸಿಎಸ್‌ಆರ್ ನೆರವು ಸಂಗ್ರಹಿಸುವ ಗುರಿ ಹೊಂದಲಾಗಿದೆ. ಇದರಿಂದ ಸರಕಾರದ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗುವುದರ ಜೊತೆಗೆ ಹೆಚ್ಚಿನ ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿ, ಜಿಲ್ಲೆಯಲ್ಲಿ ಅನುದನಿತ ಶಾಲೆಗಳು, ಅನುದಾನ ರಹಿತ ಶಾಲೆಗಳನ್ನು ಒಳಗೊಂಡಂತೆ ಒಟ್ಟು 1,857 ಸರಕಾರಿ ಶಾಲೆಗಳಿವೆ. ಪ್ರತಿಯೊಂದು ಶಾಲೆಗಳಲ್ಲೂ ಅಗತ್ಯ ಶಿಕ್ಷಕರನ್ನು ನೇಮಿಸಲಾಗಿದೆ. 2025-26ನೇ ಸಾಲಿನಲ್ಲಿ ಜಿಲ್ಲೆಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.95ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶದ ಸಂಖ್ಯೆ ಹೆಚ್ಚಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. 2026-27ನೇ ಸಾಲಿನಲ್ಲಿ ಒಟ್ಟು 248 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಅಂತಹ ಮಕ್ಕಳನ್ನು ‘ನಿರಂತರ’ ಆ್ಯಪ್ ಮೂಲಕ ಗುರುತಿಸಿ ಪುನಃ ಶಾಲೆಗೆ ಕರೆ ತರಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಕಾರ್ಯಕ್ರಮದ ಮೂಲಕ ಜಿಲ್ಲೆಯ ಎಲ್ಲಾ ಸರಕಾರಿ ಶಾಲೆಗಳಲ್ಲಿ ಪ್ರತಿದಿನ 20 ರಿಂದ 30 ನಿಮಿಷಗಳ ಕಾಲ ಪಠ್ಯೆತರ ಪುಸ್ತಕ ಓದುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ವಿಜ್ಞಾನ. ಕಂಪ್ಯೂಟರ್ ಶಿಕ್ಷಣ ಮತ್ತು ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ ಎಂದು ಉಪನಿರ್ದೇಶಕರು ವಿವರಿಸಿದರು.

ಸಭೆಯಲ್ಲಿ ಶಾಸಕರಾದ ಟಿ.ಡಿ.ರಾಜೇಗೌಡ, ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಎ.ವಿ.ಗಾಯತ್ರಿ ಶಾಂತೇಗೌಡ, ಎಸ್.ಎಲ್.ಭೋಜೇಗೌಡ, ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಹೇಶ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್, ಭದ್ರಾ-ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಜಿಪಂ ಸಿಇಒ ಮೀನಾಕ್ಷಿ ಆರ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಮಂಜುಳಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.

18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ

ಶಿಕ್ಷಕರ ಕೊರತೆಯೂ ಸರಕಾರಿ ಶಾಲೆಗಳ ದಾಖಲಾತಿ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಹಿಂದಿನ ಸರಕಾರದ ಅವಧಿಯಲ್ಲಿ ಮಂಜೂರಾಗಿದ್ದ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು 11 ತಿಂಗಳೊಳಗೆ ಪೂರ್ಣಗೊಳಿಸುವ ಮೂಲಕ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅರ್ಹ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಪ್ರಸಕ್ತ ಸುಮಾರು 18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 2,500 ಕೋ.ರೂ.

ಎಡಿಬಿ ಬ್ಯಾಂಕ್ ನೆರವಿನೊಂದಿಗೆ ಸುಮಾರು 2,500 ಕೋಟಿ ರೂ. ವೆಚ್ಚದಲ್ಲಿ 500 ಕೆಪಿಎಸ್ ಶಾಲೆಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಶಾಲೆಗಳ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಡಿಸೆಂಬರ್‌ನಲ್ಲಿ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ರಾಜ್ಯಮಟ್ಟದಲ್ಲಿ ಬೃಹತ್ ಕಾರ್ಯಕ್ರಮದ ಮೂಲಕ ಯೋಜನೆಗೆ ಚಾಲನೆ ನೀಡುವ ಉದ್ದೇಶವಿದೆ ಎಂದು ಸಚಿವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X