Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ರೈತರನ್ನು ಏಕಾಏಕಿ ಒಕ್ಕಲೆಬ್ಬಿಸಬಾರದು ; ...

ರೈತರನ್ನು ಏಕಾಏಕಿ ಒಕ್ಕಲೆಬ್ಬಿಸಬಾರದು ; ಅರಣ್ಯಾಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ

ಬಗರ್ ಹುಕುಂ ಅಕ್ರಮ-ಸಕ್ರಮ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ2 Sept 2024 11:31 PM IST
share
ರೈತರನ್ನು ಏಕಾಏಕಿ ಒಕ್ಕಲೆಬ್ಬಿಸಬಾರದು ;  ಅರಣ್ಯಾಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ

ಶಿವಮೊಗ್ಗ: ರೈತ ವಿರೋಧಿಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯ. ಆದ್ದರಿಂದ, ಮಾನವೀಯ ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಕೆಲಸ ಮಾಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

ಸೊರಬ ತಾಲೂಕು ಕಚೇರಿ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಬಗರ್ ಹುಕುಂ ಅಕ್ರಮ-ಸಕ್ರಮ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅರಣ್ಯ ರಕ್ಷಕರು ಹಾಗೂ ವನ ಪಾಲಕರ ಅಮಾನವೀಯ ವರ್ತನೆ ಅಕ್ಷಮ್ಯ ಅಪರಾಧ. ಅನೇಕ ವರ್ಷಗಳಿಂದ ಕಾನು, ಸೊಪ್ಪಿನ ಬೆಟ್ಟ, ಹುಲ್ಲುಜಾಡು ಈ ಪ್ರದೇಶಗಳಲ್ಲಿ ಕೃಷಿ ಮಾಡಿಕೊಂಡು ಬಂದಿರುವ ರೈತರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಕಾರ್ಯ ಮಾಡುತ್ತಿದ್ದಾರೆ. ಈ ರೀತಿಯ ವರ್ತನೆ ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅರಣ್ಯ ಮತ್ತು ಕಂದಾಯ ಭೂಮಿಗೆ ಸಂಬಂಧಪಟ್ಟಂತೆ ಅನೇಕ ವರ್ಷಗಳಿಂದ ಸಮಸ್ಯೆಗಳು ಜೀವಂತವಾಗಿವೆ. ಈ ಎಲ್ಲ ತೊಡಕುಗಳನ್ನು ಹಂತಹಂತವಾಗಿ ಬಗೆಹರಿಸಲಾಗುವುದು. ಬಗರ್ ಹುಕುಂ ಸಮಿತಿಗೆ ಬಂದ ಸಾಕಷ್ಟು ಅರ್ಜಿಗಳನ್ನು ಈ ಹಿಂದೆ ತಿರಸ್ಕರಿಸಲಾಗಿದೆ. ಇದರಿಂದ, ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಬಂದ ಕುಟುಂಬಗಳಿಗೆ ತೊಂದರೆ ಆಗಲಿದೆ. ರೈತರಿಂದ ಪುನಃ ದೂರುಗಳನ್ನು ಪಡೆದು ಕಾನೂನು ಪ್ರಕಾರ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ತಹಶೀಲ್ದಾರ್ ಮಂಜುಳಾ ಹೆಗಡಾಳ ಮಾತನಾಡಿ, ಬಗರ್ ಹುಕುಂ ಜಮೀನು ಮಂಜೂರಾತಿಗೆ ಸಂಬಂಧಿಸಿದಂತೆ ಈಗಾಗಲೇ ಆನ್‌ಲೈನ್ ಮೂಲಕ 5,113 ಅರ್ಜಿಗಳು ದಾಖಲಾಗಿದ್ದು, ಅವುಗಳನ್ನು ಶೀಘ್ರದಲ್ಲಿ ಬಗರ್ ಹುಕುಂ ಸಮಿತಿಗೆ ಮಂಡಿಸಲಾಗುವುದು. 91 ಅರ್ಜಿದಾರರಿಗೆ ಹಕ್ಕುಪತ್ರ ವಿತರಣೆ, 166 ಜನರಿಗೆ ನೋಂದಣಿ ಮಾಡಿಸಿಕೊಡಬೇಕಾದ ಕಾರ್ಯ ಪ್ರಗತಿಯಲ್ಲಿದೆ ಎಂದ ಅವರು, ನೂತನ ಸಮಿತಿ ಸದಸ್ಯರು ಇ-ಕೆವೈಸಿ ಮಾಡಿಸಿದ ನಂತರ ಸಾಗುವಳಿದಾರರ ಅರ್ಜಿಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಯತೀಶ್, ತಾಲೂಕು ಇಒ ಪ್ರದೀಪ್ ಕುಮಾರ್, ಡಿಎಫ್‌ಒ ಮೋಹನ್ ಕುಮಾರ್ ಡಿ., ಆರ್‌ಎಫ್‌ಒ ಶಬುಬ್ತಾ ಶೇಖ್, ಪರುಶುರಾಮ, ಜಾವೀದ್ ಅಹ್ಮದ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ. ಶೇಖರ್, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಅರಣ್ಯ ಭೂಮಿ ವಿಚಾರವಾಗಿ ನ್ಯಾಯಾಲಯ ಹಂತದಲ್ಲಿ ತನಿಖೆ ನಡೆಯುತ್ತಿದೆ. ಆದ್ದರಿಂದ, ಅರಣ್ಯ ಅಧಿಕಾರಿಗಳು ಎಚ್ಚರಿಕೆಯ ಹೆಜ್ಜೆ ಇಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ರೈತರನ್ನು ಏಕಾಏಕಿ ಒಕ್ಕಲೆಬ್ಬಿಸುವ ಕ್ರಮದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತವೆ. ಆದ್ದರಿಂದ ಅಧಿಕಾರಿಗಳು ತಾಳ್ಮೆಯ ಗುಣ ಬೆಳೆಸಿಕೊಳ್ಳಬೇಕು.

ಸಚಿವ ಮಧು ಬಂಗಾರಪ್ಪ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X