Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶರಾವತಿ ಸಂತ್ರಸ್ತರು, ಬಗರ್‌ಹುಕುಂ...

ಶರಾವತಿ ಸಂತ್ರಸ್ತರು, ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಗೆ ಶಾಸ್ವತ ಪರಿಹಾರ ಒದಗಿಸಲು ಸರ್ಕಾರ ಬದ್ಧ: ಸಚಿವ ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ21 Jun 2024 11:21 PM IST
share
ಶರಾವತಿ ಸಂತ್ರಸ್ತರು, ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಗೆ ಶಾಸ್ವತ ಪರಿಹಾರ ಒದಗಿಸಲು ಸರ್ಕಾರ ಬದ್ಧ: ಸಚಿವ ಮಧುಬಂಗಾರಪ್ಪ

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ಜಿಲ್ಲೆಯ ಬಗರ್‌ಹುಕುಂ ಸಾಗುವಳಿದಾರರ ಹಲವು ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖಾ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಸರ್ಕಾರದ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ. ಮಾಡುವ ಯಾವುದೇ ಕಾರ್ಯ ಕಾಲಮಿತಿಯಲ್ಲಿ ಪೂರ್ಣಗೊಳಿಸಿ. ಸಂತ್ರಸ್ತರಿಗೆ ನೆರವು ನೀಡುವ ವಿಷಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಉತ್ಸುಕರಾಗಿದ್ದಾರೆ. ಜನರಿಗೆ ಅನುಕೂಲವಾಗುವಂತಿದ್ದಲ್ಲಿ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಸಹಕರಿಸಿ ಎಂದರು.

ಸಂತ್ರಸ್ತರ ಸಮಸ್ಯೆಯನ್ನು ಸರಳವಾಗಿ ಸುಲಭವಾಗಿ ಇತ್ಯರ್ಥಗೊಳಿಸಲು ಅಧಿಕಾರಿಗಳು ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಬೇಕು. ಅಲ್ಲದೇ, ರೈತರಿಗೆ ಹಲವು ದಶಕಗಳ ಹಿಂದೆ ನಿಮಾನುಸಾರ ಭೂಮಿಯ ಮಂಜೂರಾತಿಯಾಗಿದ್ದರೂ ಅರಣ್ಯ ಇಲಾಖೆಯ ದಾಖಲೆಗಳಲ್ಲಿ ಬದಲಾವಣೆಯಾಗದೆ ರೈತರಿಗೆ ಅಭದ್ರತೆ ಕಾಡುತ್ತಿದೆ. ಸಾಗುವಳಿದಾರರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಬೇಕು ಎಂದ ಅವರು, ಕಾನೂನು ತೊಡಕಿಲ್ಲದೇ ಸ್ಥಳೀಯವಾಗಿ ಬಗೆಹರಿಸಬಹುದಾದ ಹಾಗೂ ಈಗಲೂ ವಿಲೇವಾರಿಯಾಗದೇ ಉಳಿದಿರುವ ಅರ್ಜಿಗಳ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅರಣ್ಯದಂಚಿನ ಹೊಲಗಳಲ್ಲಿ ಮಂಗನ ಹಾವಳಿಯಿಂದಾಗಿ ರೈತರು ತಮ್ಮ ಬೆಳೆಯನ್ನು ಸಂರಕ್ಷಿಸಿಕೊಳ್ಳುವುದೇ ಸವಾಲಿನ ಕೆಲಸವಾಗಿದೆ. ಮಂಗಗಳ ನಿಯಂತ್ರಣಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಅರಣ್ಯ ಇಲಾಖೆಯಿಂದ ಕಾನೂನು ತೊಡಕು ಎದುರಾಗುತ್ತಿದೆ. ಇದಕ್ಕೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಸಚಿವರು ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಕಂದಾಯ ಇಲಾಖೆಯು ಈ ಹಿಂದೆ ಕೆಲವು ರೈತರಿಗೆ ಮಂಜೂರಾತಿ ನೀಡಿರುವ ಭೂಮಿ ಹಕ್ಕು ಪ್ರಮಾಣ ಪತ್ರದಲ್ಲಿ ಹಂಗಾಮಿ ಎಂಬ ಪದ ಬಳಕೆಯಿಂದಾಗಿ ಸರ್ಕಾರದ ಸೌಲತ್ತುಗಳನ್ನು ಪಡೆಯಲು ಅಡಚಣೆ ಉಂಟಾಗುತ್ತಿದೆ. ಈ ಹಂಗಾಮಿ ಎಂಬ ಪದ ಕೈಬಿಟ್ಟು, ದಾಖಲೆ ಮಾಡಿಕೊಡಲು ಸರ್ಕಾರಕ್ಕೆ ಮಾರ್ಗದರ್ಶನ ನೀಡುವಂತೆ ಅರಣ್ಯಾಧಿಕಾರಿಗಳು ಕ್ರಮವಹಿಸಲು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X