Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಮುಂದಿನ ದಿನಗಳಲ್ಲಿ ಪಿಯು...

ಮುಂದಿನ ದಿನಗಳಲ್ಲಿ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್‌ : ಸಚಿವ ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ22 Aug 2026 5:58 PM IST
share
ಮುಂದಿನ ದಿನಗಳಲ್ಲಿ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್‌ :  ಸಚಿವ ಮಧುಬಂಗಾರಪ್ಪ

ಶಿವಮೊಗ್ಗ : ಬಜೆಟ್‌ನಲ್ಲಿ ಪ್ರಕಟಿಸಿದಂತೆಯೇ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್‌ ಬುಕ್‌ಗಳನ್ನು ಕೂಡ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ನಗರದ ಸೈನ್ಸ್‌ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ʻಕಲಾಂ ಸೆಂಟರ್‌ʼಗೆ ಭೇಟಿ ನೀಡಿದ ಸಚಿವರು, ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಈ ಘೋಷಣೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯ. ಆದರೆ ಎಲ್ಲವನ್ನೂ ಒಮ್ಮೆಲೆ ಮಾಡಲಾಗುವುದಿಲ್ಲ. ಹಂತ ಹಂತವಾಗಿ ರಾಜ್ಯದ ಎಲ್ಲಾ ಶಾಲೆ-ಪಿಯು ಕಾಲೇಜುಗಳಲ್ಲಿಯೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುತ್ತೇವೆ. ಇದಕ್ಕೆ ಅಗತ್ಯ ಎಲ್ಲ ಸೌಕರ್ಯಗಳನ್ನು ಒದಗಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಬೆರೆತು ಅವರ ಮಾತುಗಳನ್ನು ಕೇಳಿಸಿಕೊಂಡ ಸಚಿವರು, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆ, ಕಾಲೇಜಿನಲ್ಲಿ ತಾವು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡಾಗ ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ʻʻಮಕ್ಕಳೊಂದಿಗೆ ಸಂವಾದ ನಡೆಸುವುದು ನನಗೆ ಯಾವಾಗಲೂ ಖುಷಿಯ ವಿಷಯ. ನಾವು ನಿರೀಕ್ಷಿಸದೇ ಇರುವ ಪ್ರಶ್ನೆ, ಸಮಸ್ಯೆಗಳನ್ನು ಅವರು ನಮ್ಮ ಮುಂದಿಡುತ್ತಾರೆ. ಲವಲವಿಕೆಯ ವಾತಾವರಣ ನಿರ್ಮಿಸುತ್ತಾರೆ. ಇಂದು ಕೂಡ ಅದೇ ಆಯಿತುʼʼ ಎಂದು ಸಚಿವ ಮಧು ಬಂಗಾರಪ್ಪ ಈ ಸಂವಾದ ಕಾರ್ಯಕ್ರಮದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರ ಜೊತೆಗಿದ್ದರು.

Tags

Minister Madhubangarappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X