Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಅರಣ್ಯ ಹಕ್ಕು ತಿರಸ್ಕೃತ ಅರ್ಜಿಗಳ ಪುನರ್...

ಅರಣ್ಯ ಹಕ್ಕು ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 July 2024 9:17 PM IST
share
ಅರಣ್ಯ ಹಕ್ಕು ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಶಿವಮೊಗ್ಗ : ಅರಣ್ಯ ಹಕ್ಕು ಕಾಯಿದೆ ಅಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಈ ಎಲ್ಲ ಅರ್ಜಿಗಳ ಪುನರ್ ಪರಿಶೀಲನೆ ಮಾಡಿ, ಅರ್ಜಿದಾರರಿಗೆ ಸ್ವಾಭಾವಿಕ ನ್ಯಾಯದ ಅಡಿಯಲ್ಲಿ ತಮ್ಮ ಹಕ್ಕು ಪ್ರತಿಪಾದಿಸಲು ಅವಕಾಶ ನೀಡಬೇಕು. ಅಲ್ಲದೆ, ಈ ಪ್ರಕ್ರಿಯೆ ಪೂರ್ಣವಾಗುವವರೆಗೂ ಯಾರನ್ನೂ ಒಕ್ಕಲೆಬ್ಬಿಸಬಾರದು ಎಂದು ಪರಿಸರ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಶಿವಮೊಗ್ಗದ ಅರಣ್ಯ ಇಲಾಖೆಯ ಶ್ರೀಗಂಧ ಸಭಾಂಗಣದಲ್ಲಿ ನಡೆದ ಶಿವಮೊಗ್ಗ ವೃತ್ತದ ಅರಣ್ಯಾಧಿಕಾರಿಗಳೊಂದಿಗಿನ ಪರಾಮರ್ಶೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, "2005ರ ಡಿಸೆಂಬರ್ 13ನೇ ತಾರೀಖಿಗೆ ಮುನ್ನ ಅರಣ್ಯವಾಸಿಗಳಾಗಿದ್ದ ಎಲ್ಲ ಬುಡಕಟ್ಟು ಜನರಿಗೆ ಅರಣ್ಯ ಹಕ್ಕು ಕಾಯಿದೆ ಅಡಿ ಪರಿಹಾರ ಸಿಗಲೇಬೇಕು. ಅದೇ ರೀತಿ ಇತರ ಹಿಂದುಳಿದವರು ಈ ದಿನಾಂಕಕ್ಕೆ ಮುನ್ನ ಅರಣ್ಯದಲ್ಲಿ ಜೀವನೋಪಾಯಕ್ಕಾಗಿಯೇ ನೆಲೆಸಿದ್ದಲ್ಲಿ ನಿಯಮಾನುಸಾರ ಅವರಿಗೆ ಹಕ್ಕು ನೀಡಬೇಕಾಗುತ್ತದೆ. ಪ್ರಸ್ತುತ 3 ತಲೆಮಾರು ಅಂದರೆ 75 ವರ್ಷ ಅವರು ಅಲ್ಲಿದ್ದರು ಎಂದು ಸಾಬೀತು ಪಡಿಸುವುದು ಕಷ್ಟ ಸಾಧ್ಯವಾಗಿದ್ದು, ಈ ನಿಯಮಕ್ಕೆ ತಿದ್ದುಪಡಿ ತರುವ ಅಗತ್ಯವಿದೆ" ಎಂದು ಅಭಿಪ್ರಾಯಪಟ್ಟರು.

ಶರಾವತಿ ಸಂತ್ರಸ್ತರ ಸಮಸ್ಯೆ ಚರ್ಚೆ :

ರಾಜ್ಯಕ್ಕೆ ಬೆಳಕು ನೀಡಿದ ಶರಾವತಿ ಸಂತ್ರಸ್ತರಿಗೆ ಹಕ್ಕು ಕೊಡಿಸಲು 6 ದಶಕಗಳಿಂದ ಸಾಧ್ಯವಾಗಿಲ್ಲ. ಹೀಗಾಗಿ ಅವರಿಗೆ ಸಲ್ಲಬೇಕಾದ ನೈಜ ಹಕ್ಕು ಕೊಡಿಸಲು ಎದುರಾಗಿರುವ ತೊಡಕು ನಿವಾರಿಸಲು ಸುಪ್ರೀಂಕೋರ್ಟ್‌ನಲ್ಲಿ ಐ.ಎ. ಹಾಕಲಾಗಿದೆ. ಈ ಬಾರಿ ಸಂತ್ರಸ್ತರಿಗೆ ನ್ಯಾಯ ದೊರಕುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆ ಬಿಡುಗಡೆ ಮಾಡಿರುವ ಭೂಮಿಯನ್ನು ಮಾನ್ಯ ಮಾಡಿ, ಸಂತ್ರಸ್ತರ ಸಮಸ್ಯೆ ಶೀಘ್ರ ಬಗೆಹರಿಸಲು ಉತ್ತಮ ವಕೀಲರನ್ನು ವಿಶೇಷ ಅಭಿಯೋಜಕರಾಗಿ ನೇಮಕ ಮಾಡುವಂತೆ ಸೂಚಿಸಿದರು.

ಶೀಘ್ರವೇ 850 ಅರಣ್ಯ ಸಿಬ್ಬಂದಿಗೆ ನೇಮಕಾತಿ ಪತ್ರ ವಿತರಣೆ :

ಅರಣ್ಯ ಇಲಾಖೆಯಲ್ಲಿ ವನ ಪಾಲಕರಾಗಿ ಆಯ್ಕೆಯಾಗಿರುವ 310 ಅಭ್ಯರ್ಥಿಗಳಿಗೆ ಮತ್ತು 540 ಅರಣ್ಯ ರಕ್ಷಕರಿಗೆ ಮುಖ್ಯಮಂತ್ರಿಗಳಿಂದ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X