Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ತೀರ್ಥಹಳ್ಳಿ | ತುಂಗಾ ನದಿ ದಡದಲ್ಲಿ...

ತೀರ್ಥಹಳ್ಳಿ | ತುಂಗಾ ನದಿ ದಡದಲ್ಲಿ ರೆಸಾರ್ಟ್ : ಮಾಲಕರ ವಿರುದ್ದ ಕ್ರಮಕ್ಕೆ ನೈಜ ಹೋರಾಟಗಾರರ ವೇದಿಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 July 2024 9:44 PM IST
share
ತೀರ್ಥಹಳ್ಳಿ | ತುಂಗಾ ನದಿ ದಡದಲ್ಲಿ ರೆಸಾರ್ಟ್ : ಮಾಲಕರ ವಿರುದ್ದ ಕ್ರಮಕ್ಕೆ ನೈಜ ಹೋರಾಟಗಾರರ ವೇದಿಕೆ ಆಗ್ರಹ

ಬೆಂಗಳೂರು: ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಭಾರತಿ ಪುರದ ತುಂಗಾ ನದಿಯ ದಡದಲ್ಲಿರುವ ವಿಹಂಗಮ ಹಾಲಿಡೇ ರೆಸಾರ್ಟ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನ ನೈಜ ಹೋರಾಟಗಾರರ ವೇದಿಕೆಯು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ದೂರು ಸಲ್ಲಿಸಿದೆ.

ತೀರ್ಥಹಳ್ಳಿ ತಾಲೂಕಿನ ಭಾರತಿ ಪುರದಲ್ಲಿರುವ ವಿಹಂಗಮ ರೆಸಾರ್ಟ್ ತುಂಗಾ ನದಿಯ ದಂಡೆಯ ಮೇಲಿದೆ. ಇದು ಬಫರ್ ಜೋನ್ ವ್ಯಾಪ್ತಿಗೆ ಒಳಪಡಲಿದ್ದು, ರೆಸಾರ್ಟ್ ಮಾಲೀಕರು ಕಾರ್ಟೇಜ್ ಗಳನ್ನು ನಿರ್ಮಾಣ ಮಾಡಿ ಪ್ರವಾಸಿಗರನ್ನು ಆಕರ್ಷಣೆಗೊಳಪಡಿಸಿದ್ದಾರೆ. ಮಳೆಗಾಲ ವಾಗಿರುವುದರಿಂದ ತುಂಗಾ ನದಿ ತುಂಬಿ ಹರಿಯುತ್ತಿದೆ . ಪ್ರವಾಸಿಗರು ಉಳಿದುಕೊಳ್ಳುವ ಕಾರ್ಟೇಜ್ ಕೆಳಗೆ ನದಿ ದಂಡೆಯು ಕುಸಿತಗೊಂಡಿದ್ದು ಕಾರ್ಟೇಜ್ ಗಳು ಅಪಾಯದ ಅಂಚಿನಲ್ಲಿ ಇವೆ‌‌ ಎಂದು ಮನವಿಯಲ್ಲಿ ದೂರಲಾಗಿದೆ.

ಇದು ಕೃಷಿ ಚಟುವಟಿಕೆಗಳು ಒಳಗೊಂಡಿರುವ ರೆಸಾರ್ಟ್ ಆಗಿದ್ದು, ಅಡಿಕೆ ತೋಟ ಕೃಷಿ ಜೊತೆ ಜೊತೆಗೆ ಕಮರ್ಷಿಯಲ್ ಚಟುವಟಿಕೆಗಳು ಇಲ್ಲಿ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರು?. ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳಿಗೆ ಅನುಮತಿ ನೀಡಿದ್ದಾರಯೇ?. ಬಫರ್ ಜೋನ್ ರೆಸಾರ್ಟ್ ನಿರ್ಮಾಣಕ್ಕೆ ಅವಕಾಶವನ್ನು ನೀಡಿದ ಅಧಿಕಾರಿಗಳು ಯಾರು? ಈ ಬಗ್ಗೆ ತನಿಖೆ ನಡೆಸುವಂತೆ ವೇದಿಕೆಯು ಮನವಿ ಮಾಡಿದೆ.

ಶಿವಮೊಗ್ಗ ಜಿಲ್ಲಾಡಳಿತವು ಈ ಕೃಷಿ ಭೂಮಿಯಲ್ಲಿ ಮತ್ತು ಬಫರ್ ಜೋನ್ ನಲ್ಲಿ ರೆಸಾರ್ಟ್ ನಡೆಸಲು ಅನುಮತಿ ಕೊಡಲು ಹೇಗೆ ಸಾಧ್ಯ ಎಂದು ಸಚಿವರಿಗೆ ನೀಡಿದ ದೂರಿನಲ್ಲಿ ಪ್ರಶ್ನಿಸಲಾಗಿದೆ. ಕಾನೂನಿಗೆ ವಿರುದ್ಧವಾಗಿ ರೆಸಾರ್ಟ್ ನಡೆಸಲು ಅವಕಾಶ ನೀಡಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಒಂದು ವೇಳೆ ರೆಸಾರ್ಟ್ ಮಾಲೀಕರು ಎಲ್ಲಾ ಕಾನೂನು ಪ್ರಕ್ರಿಯೆಗಳ ಮುಖಾಂತರವೇ ರೆಸಾರ್ಟ್ ನಡೆಸುತ್ತಿದ್ದರೆ ನಮ್ಮದು ಯಾವುದೇ ಅಭ್ಯಂತರವಿರುವುದಿಲ್ಲ. ಆದರೆ ತುಂಬಿ ಹರಿಯುತ್ತಿರುವ ತುಂಗಾ ನದಿಯ ತಟದಲ್ಲಿ ಮಳೆಗಾಲದ ಕಾರಣ ನೀರಿನ ಹರಿವು ಜಾಸ್ತಿಯಾಗಿ ತುಂಗಾ ನದಿಯ ದಂಡೆ ಕುಸಿಯುತ್ತಿದೆ. ಅಲ್ಲದೆ, ರೆಸಾರ್ಟ್ ನಲ್ಲಿ ಉಳಿದುಕೊಳ್ಳುವ ಪ್ರವಾಸಿಗರು ಕಾರ್ಟೇಜ್ ನ ಹೊರಗೆ ನದಿ ನೀರು ನೋಡಿ ಖುಷಿಪಡುತ್ತಿದ್ದಾರೆ, ಇದರ ಹಿಂದಿನ ಅಪಾಯದ ಅರಿವಿಲ್ಲ ಎಂದು ದೂರಿನಲ್ಲಿ‌ ಆತಂಕ ವ್ಯಕ್ತಪಡಿಸಿದೆ.

ಬೇಸಿಗೆ ಸಮಯದಲ್ಲಿ ನದಿಯ ನೀರು ಕಡಿಮೆಯಾದಾಗ ನದಿಯಲ್ಲಿ ಬೋಟಿಂಗ್ ಕೂಡ ನಡೆಯುತ್ತದೆ. ನದಿಯು ಸಾರ್ವಜನಿಕರ ಸ್ವತ್ತಾಗಿದ್ದು, ಇದಕ್ಕೆಲ್ಲ ಅವಕಾಶ ಕೊಟ್ಟ ಅಧಿಕಾರಿಗಳು ಯಾರು?. ತುಂಗಾ ನದಿಯ ದಡದಲ್ಲಿಯೇ ಬಫರ್ ಜೋನ್ ಒಳಗೆ ಕಾರ್ಟೇಜ್ ಗಳನ್ನು ನಿರ್ಮಾಣ ಮಾಡಲು, ತುಂಗಾ ನದಿಯಲ್ಲಿ ಬೋಟಿಂಗ್ ನಡೆಸಲು ಅನುಮತಿ ಕೊಟ್ಟಿರುವುದು ಅನುಮಾನ ಹುಟ್ಟಿಸಿದೆ. ರೆಸಾರ್ಟ್ ಮಾಲೀಕರೊಂದಿಗೆ ಸ್ಥಳೀಯ ಅಧಿಕಾರಿಗಳು ಶಾಮಿಲಾಗಿರಬಹುದು‌ ಎಂಬ ಶಂಕೆ ವ್ಯಕ್ತವಾಗಿದೆ.‌

ತೀರ್ಥಹಳ್ಳಿಯ ಪ್ರಕೃತಿಯ ಸೊಬಗನ್ನು ಸವಿಯಲು ಬರುವ ಪ್ರವಾಸಿಗರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಹಾಗೂ ಪ್ರಕೃತಿ, ಪರಿಸರ ,ನದಿಯನ್ನು ದುರುಪಯೋಗಪಡಿಸಿಕೊಂಡ ರೆಸಾರ್ಟ್ ಮಾಲೀಕರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕೆಂದು ನೈಜ್ಯ ಹೋರಾಟಗಾರರ ವೇದಿಕೆಯು ಮನವಿಯಲ್ಲಿ ಒತ್ತಾಯಿಸಿದೆ.

ಈ ಹಿಂದೆ ಕೂಡ ಅರಣ್ಯ ಮತ್ತು ಪ್ರಾಣಿಗಳ ಅಂಗಾಂಗಗಳನ್ನು ರೆಸಾರ್ಟ್ ನಲ್ಲಿ ಇರಿಸಿದ ಬಗ್ಗೆ ತೀರ್ಥಹಳ್ಳಿಯ ಸ್ಥಳೀಯ ಪೊಲೀಸರು ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು, ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ತಕ್ಷಣ ಕಾನೂನು ಕ್ರಮಗಳನ್ನು ಜರುಗಿಸಬೇಕೆಂದು ನೈಜ್ಯ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X