ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಶಿವಮೊಗ್ಗ : ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಹಾಸ್ಟೆಲ್ನಲ್ಲಿ ಸೋಮವಾರ ನಡೆದಿರುವುದಾಗಿ ವರದಿಯಾಗಿದೆ. ಬೆಂಗಳೂರು ಮೂಲದ ವಿಷ್ಣುಪ್ರಿಯಾ (22) ಆತ್ಮಹತ್ಯೆಗೈದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ವಿಷ್ಣುಪ್ರಿಯಾ ವೈದ್ಯಕೀಯ ಶಿಕ್ಷಣ ಮುಗಿಸಿ ಇಂಟರ್ನ್ ಶಿಪ್ ಮಾಡುತ್ತಿದ್ದರು. ಇಂಟರ್ನ್ ಶಿಪ್ ಮುಗಿಯಲು 10 ದಿನ ಮಾತ್ರ ಬಾಕಿ ಉಳಿದಿದೆ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿದ್ಯಾರ್ಥಿನಿಯ ಮೃತದೇಹವನ್ನು ಶಿವಮೊಗ್ಗದ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ರವಾನಿಸಲಾಗಿದೆ.
ಈ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story