ಶಿವಮೊಗ್ಗ | ಕ್ಯಾಂಟರ್ ಲಾರಿಗೆ ಕಾರು ಢಿಕ್ಕಿ; ಓರ್ವ ಮೃತ್ಯು

ಶಿವಮೊಗ್ಗ: ಡಿವೈಡರ್ ಮೇಲೆ ಹತ್ತಿದ ಕಾರೊಂದು ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಲಾರಿಗೆ ಢಿಕ್ಕಿಯಾಗಿದ್ದು, ಓರ್ವ ಯುವಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸವಳಂಗ ರಸ್ತೆಯ ಮತ್ತೋಡು ಮತ್ತು ಅಬ್ಬಲಗೆರೆಯ ಮಧ್ಯೆ ನಡೆದಿದೆ.
ಘಟನೆಯಲ್ಲಿ ಸಾಹಿಲ್(19) ಎಂಬಾತ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಶಿಕಾರಿಪುರ ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ಹಾರಿ ಬಂದಿದೆ. ರಸ್ತೆಯ ಮತ್ತೊಂದು ಬದಿಯಲ್ಲಿ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಕ್ಯಾಂಟರ್ ಲಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಮುಂಭಾಗಕ್ಕೂ ಹಾನಿಯಾಗಿದೆ ಎನ್ನಲಾಗಿದೆ.
Next Story





