ಹೃದಯಾಘಾತದಿಂದ ನಿರ್ಮಾಪಕ ಭಾ.ಮಾ. ಹರೀಶ್ ಪುತ್ರ ಉಲ್ಲಾಸ್ ಗೌಡ ನಿಧನ

ಶಿವಮೊಗ್ಗ: ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ಮಾಪಕ ಭಾ.ಮಾ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ(28) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಉಲ್ಲಾಸ್ ಗೌಡ ತಮ್ಮ ಸ್ನೇಹಿತರ ಜೊತೆ ಕೊಡಚಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಇಂದು(ಶನಿವಾರ) ಬೆಳಗ್ಗೆ ಬೆಟ್ಟ ಹತ್ತಿ, ಸರ್ವಜ್ಞ ಪೀಠದಿಂದ ವಾಪಸ್ ಇಳಿಯುವಾಗ ತೀವ್ರ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಸ್ನೇಹಿತರು ಅವರನ್ನು ಹೊಸನಗರ ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ಬರುವಷ್ಟರಲ್ಲಿ ಉಲ್ಲಾಸ್ ಗೌಡ ಸಾವನ್ನಪ್ಪಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಪಿಎಸ್ಐ ಶಿವಾನಂದ ಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Next Story




