Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ...

ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ: ಮನೆಗೆ ತೆರಳಿ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಕಾಗೋಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲು ಸರ್ಕಾರವೇ ಮನೆಗೆ ಬರಲಿದೆ: ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ31 Oct 2026 11:25 AM IST
share
ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ: ಮನೆಗೆ ತೆರಳಿ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಸಾಗರ: ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರೂ ಆದ ಮಧು ಬಂಗಾರಪ್ಪ ಅವರು ಇಂದು ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಸಚಿವ ಮಧು ಬಂಗಾರಪ್ಪ ಅವರು ವಿಡಿಯೋ ಕರೆ ಮಾಡಿ, ಕಾಗೋಡು ತಿಮ್ಮಪ್ಪ ಅವರೊಂದಿಗೆ ಮಾತನಾಡಿಸಿದರು. ಹಿರಿಯ ನಾಯಕನಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದಕ್ಕೆ ಮುಖ್ಯಮಂತ್ರಿ ಶುಭಾಶಯ ತಿಳಿಸಿ, ರಾಜಕೀಯ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರ ಸೇವೆ ಅನುಕರಣೀಯವಾಗಿದೆ. ಭಗವಂತ ನಿಮಗೆ ಉತ್ತಮ ಆರೋಗ್ಯ ನೀಡಲಿ. ನಿಮ್ಮ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ ಎಂದು ಹಾರೈಸಿದರು.

ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಬೆಂಗಳೂರಿಗೆ ಆಗಮಿಸುವುದು ಕಷ್ಟವಾಗಬಹುದೆಂಬ ಹಿನ್ನೆಲೆಯಲ್ಲಿ, ಹೆಲಿಕಾಪ್ಟರ್ ವ್ಯವಸ್ಥೆ ಮಾಡಬೇಕೇ ಎಂದು ಮುಖ್ಯಮಂತ್ರಿ ವಿಚಾರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ ಅವರು, “ಬೇಡ, ನಾನು ಹೇಗೋ ಬರುವೆ” ಎಂದು ತಮ್ಮ ಸರಳ ಸ್ವಭಾವವನ್ನು ಮತ್ತೊಮ್ಮೆ ಮೆರೆದರು.

ಕಾಗೋಡು ಅವರ ಮನೆಗೆ ತೆರಳಿ ಪ್ರಶಸ್ತಿ ಪ್ರದಾನ: ಮಧು ಬಂಗಾರಪ್ಪ

ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಬೆಂಗಳೂರಿಗೆ ಬಂದು ಪ್ರಶಸ್ತಿ ಸ್ವೀಕರಿಸಲು ಅವರಿಗೆ ತೊಂದರೆಯಾಗಬಹುದು. ಈ ಹಿನ್ನೆಲೆಯಲ್ಲಿ ಸರ್ಕಾರವೇ ಅವರ ಮನೆಗೆ ತೆರಳಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಕಾಗೋಡು ತಿಮ್ಮಪ್ಪ ಅವರು ಸಚಿವ ಮಧು ಬಂಗಾರಪ್ಪ ಅವರ ಕೈಗೆ ಮುತ್ತಿಟ್ಟು ಪ್ರೀತಿಯಿಂದ ಮಾತನಾಡಿ, “ಸಣ್ಣ ವಯಸ್ಸಿನಲ್ಲೇ ಸಚಿವರಾಗಿದ್ದೀರಿ. ಒಳ್ಳೆಯ ಕೆಲಸ ಮಾಡಿ, ರಾಜಕೀಯದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಿರಿ” ಎಂದು ಹಾರೈಸಿದರು. ಹಿರಿಯ ನಾಯಕನ ಈ ಪ್ರೀತಿ ಮತ್ತು ಆಶೀರ್ವಾದದ ಕ್ಷಣ ಎಲ್ಲರ ಗಮನ ಸೆಳೆಯಿತು.

ಕಾಗೋಡು ತಿಮ್ಮಪ್ಪರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು, ʻʻಶರಾವತಿ ಸಂತ್ರಸ್ತರಿಗೆ ಭೂಹಕ್ಕು ನೀಡುವ ಸಂಬಂಧ ಸಮಗ್ರವಾಗಿ ಪರಿಶೀಲನೆ ನಡೆಸಿ ಪ್ರಸ್ತಾವನೆ ಸಿದ್ಧಪಡಿಸಿದ್ದೇವೆ. ಸದ್ಯವೇ ಇದಕ್ಕೆ ಸಚಿವ ಸಂಪುಟದ ಒಪ್ಪಿಗೆ ಪಡೆದು, ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುತ್ತೇವೆ. ಶೀಘ್ರದಲ್ಲೇ ಅವರಿಗೆಲ್ಲಾ ಹಕ್ಕು ಪತ್ರ ದೊರೆಯುವಂತೆ ಮಾಡಿ, ನಿಮ್ಮ ಬಹುದಿನಗಳ ಕನಸು ಈಡೇರುವಂತೆ ಮಾಡುತ್ತೇವೆʼʼ ಎಂದು ತಿಳಿಸಿದರು.

ಹೋರಾಟದ ಬದುಕಿಗೆ ಸಂದ ಗೌರವ

ಕರ್ನಾಟಕ ರಾಜ್ಯ ಸರ್ಕಾರ ಪ್ರತಿ ವರ್ಷ ನವೆಂಬರ್ 1ರಂದು ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದೆ. ಈ ವರ್ಷದ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಸಮಾಜಸೇವೆ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಹಿರಿಯ ಸಮಾಜವಾದಿ ಚಿಂತಕ, ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಮಾಜಿ ಸಚಿವ ಡಾ. ಕಾಗೋಡು ತಿಮ್ಮಪ್ಪ ಅವರ ಹೆಸರೂ ಸೇರಿದೆ.

ಸಮಾಜದ ಕಟ್ಟಕಡೆಯ ವ್ಯಕ್ತಿಯ ಹಕ್ಕುಗಳಿಗಾಗಿ ಹೋರಾಡಿದ ಕಾಗೋಡು ತಿಮ್ಮಪ್ಪ ಅವರು, ಜನಪರ ಚಿಂತನೆ, ಸಾಮಾಜಿಕ ನ್ಯಾಯದ ಬದ್ಧತೆ ಹಾಗೂ ಸರಳ ಜೀವನದ ಮೂಲಕ ರಾಜಕೀಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಅವರ ದೀರ್ಘಕಾಲದ ಸಾರ್ವಜನಿಕ ಸೇವೆ ಮತ್ತು ಹೋರಾಟದ ಬದುಕಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X