Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಬೇಸೂರು ಅಣು ವಿದ್ಯುತ್ ಸ್ಥಾವರ ಖಂಡಿಸಿ...

ಬೇಸೂರು ಅಣು ವಿದ್ಯುತ್ ಸ್ಥಾವರ ಖಂಡಿಸಿ ಸಾಗರದಲ್ಲಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 May 2026 12:41 AM IST
share
ಬೇಸೂರು ಅಣು ವಿದ್ಯುತ್ ಸ್ಥಾವರ ಖಂಡಿಸಿ ಸಾಗರದಲ್ಲಿ ಬೃಹತ್ ಪ್ರತಿಭಟನೆ

ಸಾಗರ, ಮೇ 7: ಬೇಸೂರು ಅಣು ವಿದ್ಯುತ್ ಸ್ಥಾವರ ಖಂಡಿಸಿ ಗುರುವಾರ ಜನ ಹೋರಾಟ ವೇದಿಕೆ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.

ಶಿವಪ್ಪನಾಯಕ ವೃತ್ತದಿಂದ ಹೊರಟ ಬೃಹತ್ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಗರದ ಗಾಂಧಿ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆ ನಂತರ ಉಪ ವಿಭಾಗಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಬೇಸೂರು ಅಣು ವಿದ್ಯುತ್ ಸ್ಥಾವರ ಯಾವುದೇ ಕಾರಣಕ್ಕೂ ಬೇಸೂರು ಮಾತ್ರವಲ್ಲದೆ, ನಮ್ಮ ರಾಜ್ಯದಲ್ಲಿಯೇ ಬೇಡ. ನಾಡಿಗೆ ಬೆಳಕು ನೀಡಲು ಮೂರು ಬಾರಿ ನಿರಾಶ್ರಿತರಾದ ಜನರ ಮೇಲೆ ಮತ್ತೆ ಮತ್ತೆ ಹೊಸ ಹೊಸ ಯೋಜನೆ ಹೇರುವುದನ್ನು ಸಹಿಸುವುದಿಲ್ಲ. ನನ್ನ ಶಾಸಕ ಸ್ಥಾನ ಹೋದರೂ ಚಿಂತೆಯಿಲ್ಲ. ಯಾವುದೇ ಕಾರಣಕ್ಕೂ ಅಣು ಸ್ಥಾವರವಾಗಲು ಬಿಡುವುದಿಲ್ಲ ಎಂದರು.

ಹೋರಾಟ ಸಮಿತಿ ಅಧ್ಯಕ್ಷ ಬಿ.ಎ.ಇಂದೂಧರ ಬೇಸೂರು ಮಾತನಾಡಿ, ಯಾವುದೇ ಕಾರಣಕ್ಕೂ ಬೇಸೂರು ಭಾಗದಲ್ಲಿ ಅಣು ವಿದ್ಯುತ್ ಸ್ಥಾವರ ಬೇಡ ಎಂದು ಸರಣಿ ಸಭೆ ನಡೆಸಿ ಹೋರಾಟ ರೂಪಿಸಲಾಗಿದೆ. ಯೋಜನೆ ಕೈಬಿಡುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ಈಗಾಗಲೆ ಯೋಜನೆ ಬೇಡ ಎಂದು ಶಾಸಕರು ಸರಕಾರಕ್ಕೆ, ಮುಖ್ಯಮಂತ್ರಿ, ಸಚಿವರಿಗೆ ಮನವಿ ನೀಡಿದ್ದಾರೆ. ಸಂಸದರಿಗೂ ಯೋಜನೆ ಕೈಬಿಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಅನ್ಸರ್ ಸಖಾಫಿ, ಜಿಪಂ ಮಾಜಿ ಸದಸ್ಯ ಬಿ.ಆರ್. ಜಯಂತ್, ದಿನೇಶ್ ಶಿರವಾಳ, ಅಖಿಲೇಶ್ ಚಿಪ್ಳಿ, ಮಲ್ಲಿಕಾರ್ಜುನ ಹಕ್ರೆ, ಪ್ರಸನ್ನ ಕೆರೆಕೈ, ರವಿಕುಮಾರ್ ಸಿಗಂದೂರು, ಪೋಷಿಣಿ ಬೇಸೂರು ಮಾತನಾಡಿದರು.

ಪ್ರತಿಭಟನೆಯಲ್ಲಿ ಶಿವಾನಂದ ಕುಗ್ವೆ, ವ.ಶಂ.ರಾಮಚಂದ್ರ ಭಟ್, ಹೊನಗೋಡು ರತ್ನಾಕರ್, ರವಿಕುಮಾರ್ ಎಚ್.ಎಂ., ಎಂ.ವಿ.ಪ್ರತಿಭಾ, ಸಫಿಯಾ ಅಬೂಬಕರ್, ಸುವರ್ಣಾ ಟೀಕಪ್ಪ, ಚೇತನರಾಜ ಕಣ್ಣೂರು, ಡಾ. ಜೀವನ್, ರೋಹಿತ್ ಮತ್ತಿತರರು ಭಾಗವಹಿಸಿದ್ದರು. ಜಿ.ಟಿ.ಸತ್ಯನಾರಾಯಣ ಕಾರ್ಯಕ್ರಮ ನಿರ್ವಹಿಸಿದರು.

ರಾಜ್ಯ ಸರಕಾರದ ಹಂತದಲ್ಲಿ ಸ್ಥಾವರಕ್ಕೆ ಭೂಮಿ ಮಂಜೂರು ಆಗದಂತೆ ನಾನು ನೋಡಿಕೊಳ್ಳುತ್ತೇನೆ. ಕೇಂದ್ರ ಹಂತದಲ್ಲಿ ಯೋಜನೆಗೆ ಅನುಮತಿ ನೀಡದಂತೆ ಸಂಸದ ಬಿ.ವೈ.ರಾಘವೇಂದ್ರ ಒತ್ತಡ ಹಾಕಬೇಕು. ಅಣು ವಿದ್ಯುತ್ ಸ್ಥಾವರವಾದರೆ ಈ ಭಾಗ ಸಂಪೂರ್ಣ ನಾಶವಾಗುತ್ತದೆ. ಜನರಿಗೆ ಮಾರಕವಾಗುವ ಯಾವುದೇ ಯೋಜನೆಯನ್ನು ಅನುಷ್ಠಾನಕ್ಕೆ ನಾನು ಬಿಡುವುದಿಲ್ಲ. ಇದಕ್ಕಾಗಿ ಎಂತಹ ತ್ಯಾಗಕ್ಕೆ ಬೇಕಾದರೂ ಸಿದ್ಧನಿದ್ದೇನೆ.

ಗೋಪಾಲಕೃಷ್ಣ ಬೇಳೂರು, ಶಾಸಕ

ಅಣು ವಿದ್ಯುತ್ ಸ್ಥಾವರವಾದರೆ ಕೇವಲ ಬೇಸೂರಿಗೆ ಮಾತ್ರ ತೊಂದರೆ ಎನ್ನುವ ಮನೋಭಾವದಿಂದ ಜನರು ಹೊರಗೆ ಬರಬೇಕು. ಮಲೆನಾಡು ಪ್ರದೇಶದಲ್ಲಿ ಈ ಯೋಜನೆ ಸಾಧುವಲ್ಲ ಎಂದು ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನದಟ್ಟು ಮಾಡಿಕೊಡಬೇಕಾಗಿದೆ. ಸುಮಾರು ನಾಲ್ಕು ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಚಿಂತನೆ ನಡೆದಿದ್ದು, ಇದಕ್ಕೆ 2 ಸಾವಿರ ಎಕರೆ ಭೂಮಿ ಕೇಳಿದ್ದಾರೆ. ಆದರೆ, ಇಷ್ಟೊಂದು ವಿದ್ಯುತ್ ಸರಬರಾಜು ಮಾಡಲು ವಿದ್ಯುತ್ ತಂತಿ ಎಳೆಯಲು ಸಾವಿರಾರು ಎಕರೆ ಅರಣ್ಯ ನಾಶವಾಗುತ್ತದೆ. ಈಗಾಗಲೆ ಸಂಸದರು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರಿಗೂ ಅಣು ಸ್ಥಾವರ ಸ್ಥಾಪನೆ ಕುರಿತ ಮಾಹಿತಿ ನೀಡಲಾಗಿದ್ದು, ಅವರ ಮೂಲಕವೂ ಕೇಂದ್ರದ ಮೇಲೆ ಒತ್ತಡ ಹೇರಲಾಗುತ್ತದೆ.

ಹರತಾಳು ಹಾಲಪ್ಪ, ಮಾಜಿ ಸಚಿವ

Tags

sagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X