Sagara | 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಸಾಗರ : 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀಧರ ನಗರದಲ್ಲಿ ಸೋಮವಾರ ನಡೆದಿದೆ.
ಸೊಂಟ ನೋವು ತಾಳಲಾರದೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ನಗರದ ಸಿದ್ದೇಶ್ವರ ಸರಕಾರಿ ಪ್ರೌಢ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕಾಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆಕಾಶ್ ಕೆಲ ದಿನಗಳ ಹಿಂದೆ ನಲ್ಲಿಯಿಂದ ನೀರು ತರಲು ಹೋದಾಗ ಜಾರಿ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದನು ಎನ್ನಲಾಗಿದೆ.
ಸೋಮವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
Next Story




