Sagara | ಬಸ್-ಕಾರಿನ ನಡುವೆ ಮುಖಾಮುಖಿ ಢಿಕ್ಕಿ

ಸಾಗರ : ತಾಲೂಕಿನ ಆನಂದಪುರ ಸಮೀಪದ ದಾಸಕೊಪ್ಪ ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ರವಿವಾರ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಸಾಗರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ದಂಪತಿ ಸೇರಿದಂತೆ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಪುಟ್ಟ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ
ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Next Story




