Sagara | ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ; ಪ್ರಯಾಣಿಕರು ಸುರಕ್ಷಿತ

ಸಾಗರ,ಅ.08 : ಚಲಿಸುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಇಡೀ ಬಸ್ ಬೆಂಕಿಗಾಹುತಿಯಾದ ಘಟನೆ ಗುರುವಾರ ಬೆಳಗ್ಗೆ ಆನಂದಪುರದ ಮುಂಬಾಳು ರೈಲ್ವೆ ಗೇಟ್ ಸಮೀಪ ಸಂಭವಿಸಿದೆ. ಈ ವೇಳೆ ಬಸ್ಸಿನಲ್ಲಿದ್ದ ಎರಡು ಪ್ರಯಾಣಿಕರು ಸೇರಿದಂತೆ ಚಾಲಕ ನಿರ್ವಾಹಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ನಿರ್ವಾಹಕ, ಚಾಲಕ ಬಸ್ಸನ್ನು ನಿಲ್ಲಿಸಿ, ಬಸ್ಸಿನಲ್ಲಿದ್ದ ಎರಡು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಚಾಲಕ, ನಿರ್ವಾಹಕರ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಸಾಗರ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story




