ಸಾಗರ | ಗ್ಯಾಸ್ ಸಿಲಿಂಡರ್ ಸ್ಫೋಟ; ವ್ಯಕ್ತಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ | PC : freepik
ಸಾಗರ : ತಾಲ್ಲೂಕಿನ ಚಿಪ್ಪಳಿ ಸಮೀಪದ ಆದಿಶಕ್ತಿ ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿವುದಾಗಿ ವರದಿಯಾಗಿದೆ.
ಆದಿಶಕ್ತಿ ನಗರದ ವೆಂಕಟೇಶ್ ಎಂಬುವವರ ಮನೆಗೆ ಗ್ಯಾಸ್ ಸಿಲಿಂಡರ್ ತಂದಿರಿಸಲಾಗಿತ್ತು. ಗ್ಯಾಸ್ ಸಿಲಿಂಡರ್ನಲ್ಲಿ ಲೀಕೇಜ್ ಇದ್ದದ್ದನ್ನು ವೆಂಕಟೇಶ್ ಅವರು ಗಮನಿಸಿಲ್ಲ ಎನ್ನಲಾಗುತ್ತಿದೆ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆ ಮಾಲೀಕ ವೆಂಕಟೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವೆಂಕಟೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಕಿರಣ್ ಹಾಗೂ ಧರಣೇಶ್ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story





