ಸಾಗರ | ದೃಷ್ಟಿದೋಷದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಸಾಗರ: ಇಲ್ಲಿನ ನೆಹರು ನಗರದ ನಿವಾಸಿ, ಗಜಾನನ ಸಾರಿಗೆ ಸಂಸ್ಥೆಯ ನಿವೃತ್ತ ಉದ್ಯೋಗಿ ಕೋಟಿ ಶೆಟ್ಟಿ (73) ಎಂಬವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ.
ಕೋಟಿ ಶೆಟ್ಟಿ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ "ನನ್ನ ಎರಡು ಕಣ್ಣುಗಳು ಸರಿಯಾಗಿ ಕಾಣದೆ ಇರುವುರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ನನ್ನ ಕುಟುಂಬಕ್ಕೆ ಸಮಸ್ಯೆ ಮಾಡಬೇಡಿ'' ಎಂದು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೇಟೆ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





