Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಸಾಗರ | ಮೂರು ಗೋಕಳ್ಳತನ ಪ್ರಕರಣ : ಓರ್ವ...

ಸಾಗರ | ಮೂರು ಗೋಕಳ್ಳತನ ಪ್ರಕರಣ : ಓರ್ವ ಆರೋಪಿ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ10 Oct 2026 3:53 PM IST
share
ಸಾಗರ | ಮೂರು ಗೋಕಳ್ಳತನ ಪ್ರಕರಣ : ಓರ್ವ ಆರೋಪಿ ವಶಕ್ಕೆ

ಸಾಗರ: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನಡೆದ ಮೂರು ಗೋಕಳ್ಳತನ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ಡಾ.ಬೆನಕ ಪ್ರಸಾದ್ ತಿಳಿಸಿದರು.

ಇಲ್ಲಿನ ಡಿವೈಎಸ್‌ಪಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸಲಾಗಿದೆ. ಪ್ರಕರಣಗಳಿಗೆ ಸಂಬಂಧಿಸಿದಂತೆ ಭದ್ರಾವತಿಯ ಇಬ್ಬರು ಆರೋಪಿಗಳ ಪೈಕಿ ಬರ್ಕತ್ ವುಲ್ಲಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೊಬ್ಬ ಆರೋಪಿ ನಸ್ರುಲ್ಲಾ ತಪ್ಪಿಸಿಕೊಂಡಿದ್ದಾನೆ ಎಂದು ಹೇಳಿದರು.

ಸಾಗರದ ವಾಟರ್ ಟ್ಯಾಂಕ್ ಸಮೀಪ ಹಸುವೊಂದನ್ನು ಹಿಡಿಯಲು ಅದರ ಮೇಲೆ ಹಲ್ಲೆ ನಡೆಸಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಕೃತ್ಯವನ್ನು ಭದ್ರಾವತಿಯ ನಸ್ರುಲ್ಲಾ ನಡೆಸಿರುವುದು ತನಿಖೆಯಿಂದ ಖಚಿತವಾಗಿದೆ ಎಂದು ಅವರು ತಿಳಿಸಿದರು.

ಗೋಕಳ್ಳತನ ತಡೆಗೆ ವಿಶೇಷ ತಂಡ ರಚನೆ :

ಮುಂದಿನ ದಿನಗಳಲ್ಲಿ ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಇತ್ತೀಚೆಗೆ ನಡೆದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಶಾಸಕರು ಗೋಕಳ್ಳತನ ತಡೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಈ ಉದ್ದೇಶಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಿಯೂ ಗೋಕಳ್ಳತನ ಹಾಗೂ ಜಾನುವಾರುಗಳ ಅಕ್ರಮ ಸಾಗಣೆ ನಡೆಯದಂತೆ ನಿಗಾ ವಹಿಸಲಾಗುವುದು ಎಂದು ಹೇಳಿದರು.

ತಾಲ್ಲೂಕಿನಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಸೇರಿದಂತೆ ಯಾವುದೇ ರೀತಿಯ ಪ್ರಕರಣಗಳು ನಡೆದಿದ್ದರೂ ಸಂತ್ರಸ್ತೆಯರು ನಿರ್ಭಯವಾಗಿ ದೂರು ನೀಡಬಹುದು. ನೇರವಾಗಿ ತಮ್ಮ ಗಮನಕ್ಕೂ ತಂದರೆ ನ್ಯಾಯ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೇಬಲ್ ಕಳ್ಳತನ ಮಾಡಿದವರ ವಿರುದ್ಧ ಕ್ರಮ :

ತಾಲ್ಲೂಕಿನಲ್ಲಿ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದಲ್ಲಿ ಪಂಪ್‌ಸೆಟ್‌ಗಳ ಕೇಬಲ್ ಕಳವು ಮಾಡುತ್ತಿರುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಳವು ಮಾಡಿದ ತಾಮ್ರದ ತಂತಿಗಳನ್ನು ಅಂಗಡಿಯವರು ಖರೀದಿಸಿದರೆ ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗಾಂಜಾ ಸೇವನೆ : ಐವರ ವಿರುದ್ಧ ಪ್ರಕರಣ

ಇತ್ತೀಚೆಗೆ ವಸತಿಗೃಹವೊಂದರಲ್ಲಿ ನಾಲ್ವರು ವಿಚಿತ್ರವಾಗಿ ವರ್ತಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದಾಗ ಓರ್ವ ಯುವತಿ ಹಾಗೂ ಮೂವರು ಯುವಕರು ಸಿಕ್ಕಿಬಿದ್ದಿದ್ದರು. ಅವರು ಗಾಂಜಾ ಸೇವನೆಗೆ ಸಿದ್ಧತೆ ನಡೆಸಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಹೇಳಿದರು.

ನಾಲ್ವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಗಾಂಜಾ ಸೇವನೆ ಮಾಡಿದ ನಾಲ್ವರು ಹಾಗೂ ಗಾಂಜಾ ಸರಬರಾಜು ಮಾಡಿದ ಮತ್ತೊಬ್ಬ ಸೇರಿದಂತೆ ಒಟ್ಟು ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ನಗರ ಠಾಣೆಯ ವೃತ್ತ ನಿರೀಕ್ಷಕ ಪುಲ್ಲಯ್ಯ ರಾಥೋಡ್, ಪಿಎಸ್‌ಐ ಶಾಂತರಾಜ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಸನಾವುಲ್ಲ, ರವಿಕುಮಾರ್, ಕೃಷ್ಣಮೂರ್ತಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು ಎಂದು ಮಾಹಿತಿ ನೀಡಿದರು.

Tags

cattle theft casesagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X