Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಟಾಸ್ಕ್ ಫೋರ್ಸ್ ರಚನೆ ಕುರಿತು ಸಿಎಂ ಜೊತೆ...

ಟಾಸ್ಕ್ ಫೋರ್ಸ್ ರಚನೆ ಕುರಿತು ಸಿಎಂ ಜೊತೆ ಚರ್ಚೆ : ಶಾಲಿನಿ ರಜನೀಶ್

ಶರಾವತಿ ಮುಳುಗಡೆ ಸಂತ್ರಸ್ತರ ಜೊತೆ ಸಭೆ

ವಾರ್ತಾಭಾರತಿವಾರ್ತಾಭಾರತಿ30 Oct 2024 8:45 PM IST
share
ಟಾಸ್ಕ್ ಫೋರ್ಸ್ ರಚನೆ ಕುರಿತು ಸಿಎಂ ಜೊತೆ ಚರ್ಚೆ : ಶಾಲಿನಿ ರಜನೀಶ್

ಬೆಂಗಳೂರು: "ಶರಾವತಿ ಮುಳುಗಡೆ ಸಂತ್ರಸ್ಥರ ಭೂಮಿ ಹಕ್ಕಿನ‌ ಸಮಸ್ಯೆ ಪರಿಹಾರ ಕುರಿತು ಟಾಸ್ಕ್ ಪೋರ್ಸ್ ರಚನೆ ಮತ್ತು ಶರಾವತಿ ಭೂಮಿ ಹಕ್ಕಿನ ಸಮಸ್ಯೆಗೆ ಶಾಸನಾತ್ಮಕ ಪರಿಹಾರ ಒದಗಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗುವುದು" ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದರು

ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ಶರಾವತಿ ಯೋಜನೆ ಮುಳುಗಡೆ ಸಂತ್ರಸ್ತರು, ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಸಮಸ್ಯೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಿಳಿಸಿದರು.

ಶರಾವತಿ ಮುಳುಗಡೆ ಸಂತ್ರಸ್ಥರ ಪರವಾಗಿ ರಾಜ್ಯ ಸರಕಾರವಿದೆ. ಟಾಸ್ಕ್ ಪೋರ್ಸ್ ರಚನೆ ಮತ್ತು ಶರಾವತಿ ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ಸಮಸ್ಯೆ ಕುರಿತು ಶಾಸನಾತ್ಮಕ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೂರು ಎಕರೆಗಿಂತ ಕೆಳಗಿನ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ನೋಟೀಸ್ ನೀಡಿ ದಬ್ಬಾಳಿಕೆ ಮಾಡುತ್ತಿರುವ ಬಗ್ಗೆ ರೈತರ ನಿಯೋಗದ ಮುಖಂಡರಾದ ತೀ.ನಾ ಶ್ರೀನಿವಾಸ್ ಸಭೆಯಲ್ಲಿ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಕಾರ್ಯದರ್ಶಿಗಳು, ನ್ಯಾಯಾಲಯದ ಆದೇಶದ ಹೆಸರಿನಲ್ಲಿ ಅರಣ್ಯಾಧಿಕಾರಿಗಳು ರೈತ ವಿರೋಧಿ ಕ್ರಮವನ್ನು ಕೈಗೊಂಡರೇ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಭಾಗವಹಿಸಿದ್ದ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಸಾಗರ ಬಾರಂಗಿ ಹೋಬಳಿಯ ಉರುಳುಗಲ್ಲು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸರಕಾರ ಬದ್ದವಾಗಿದೆ. ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಚಿವ ಮಧುಬಂಗಾರಪ್ಪ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಕಾರ್ಯದರ್ಶಿಗಳು,ಉರುಳುಗಲ್ಲು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಅರಣ್ಯ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಈ‌ ಕುರಿತು ಮತ್ತೊಮ್ಮೆ ಸಭೆ ಕರೆದು ಚರ್ಚಿಸಲಾಗುವುದು ಎಂದರು.

ಮುಳುಗಡೆ ಆಗದ ಕೆಪಿಸಿ ಭೂಮಿಯನ್ನು ಸಕ್ರಮೀಕರಣಗೊಳಿಸುವ ಕುರಿತು ಪುನರ್ ಸರ್ವೆ ಮಾಡಬೇಕು. ಈ ಕುರಿತು ನ್ಯಾಯಾಲಯದಲ್ಲಿ ವಾದಿಸಲು ಸರಕಾರ ಕಠಿಣಾತ್ಮಕ ಹೆಜ್ಜೆ ಇಡಬೇಕು ಎಂದು ರೈತ ಮುಖಂಡರು ಸರಕಾರದ ಗಮನ ಸೆಳೆದರು. ಈ ಬಗ್ಗೆ ಕ್ರಮ ವಹಿಸುವ ಕುರಿತು ಮುಖ್ಯ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.

ಸಭೆಯಲ್ಲಿ ರೈತ ಮುಖಂಡರಾದ ತೀ.ನಾ ಶ್ರೀನಿವಾಸ್, ಬಿ.ಆರ್ ಜಯಂತ್, ವಿ.ಜಿ ಶ್ರೀಕರ್, ದಿನೇಶ್ ಶಿರಿವಾಳ, ದೂಗುರು ಪರಮೇಶ್ವರ್, ಬಿ.ಎ ರಮೇಶ್ ಹೆಗಡೆ, ವಕೀಲರಾದ ಧರ್ಮರಾಜ್ ಸೇರಿದಂತೆ ಹಲವರಿದ್ದರು.

ಅಧಿಕಾರಿಗಳಿಗೆ ಚಾಟಿ :

ಅರಣ್ಯ ಹಕ್ಕು ಕಾಯ್ದೆಯಡಿ ರೈತರು ಸಲ್ಲಿಸಿದ ಅರ್ಜಿಗಳನ್ನು ವಿಚಾರಣೆ ನಡೆಸದೆ ವಜಾಗೊಳಿಸಿದ್ದಾರೆ. ಜಿಲ್ಲೆಯಲ್ಲಿ 80 ಸಾವಿರ ಅರ್ಜಿಗಳನ್ನು ವಜಾ ಮಾಡಿದ್ದಾರೆ ಎಂದು ರೈತ ಮುಖಂಡ ತೀ.ನಾ ಶ್ರೀನಿವಾಸ್ ಸರಕಾರದ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಸ್ ಅವರು, ಸರಕಾರದ ಆದೇಶದ ವಿರುದ್ದವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ನಡೆದುಕೊಳ್ಳಬಾರದು. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ರೈತರ ಅರ್ಜಿಗಳನ್ನು ವಿಚಾರಣೆ ನಡೆಸದೇ ವಜಾಗೊಳಿಸಿದ್ದರೇ ಕ್ರಮ ವಹಿಸಲಾಗುವುದು. ರಾಜ್ಯ ಮಟ್ಟದಲ್ಲಿ ಅರಣ್ಯ ಹಕ್ಕು ಸಭೆ ಕರೆದು ಚರ್ಚೆ ನಡೆಸುತ್ತೇವೆ. ಅರ್ಜಿಗಳನ್ನು ಪುನರ್ ಪರಿಶೀಲನೆ ನಡೆಸಲು ನಿರ್ದೇಶನ ನೀಡಲಾಗುವುದು ಎಂದರು.

ಸುಪ್ರೀಂ ಕೋರ್ಟ್ ನಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಧಿಸಿದಂತೆ ಸರಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ. ನುರಿತ ವಕೀಲರನ್ನು ನೇಮಕ ಮಾಡಲಾಗಿದೆ. ಇದನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಕ್ರಮವಹಿಸಬೇಕು.

-ಮಧು ಬಂಗಾರಪ್ಪ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X