Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಗೆ...

ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಗೆ ಅರಣ್ಯ ಸಲಹಾ ಸಮಿತಿ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ13 Aug 2025 11:42 PM IST
share
ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಗೆ ಅರಣ್ಯ ಸಲಹಾ ಸಮಿತಿ ಆಕ್ಷೇಪ

ಶಿವಮೊಗ್ಗ: ರಾಜ್ಯ ಸರಕಾರದ ಬಹುನಿರೀಕ್ಷಿತ ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಗೆ ಕೇಂದ್ರ ಅರಣ್ಯ ಸಚಿವಾಲಯದ ಅಧೀನದ ಅರಣ್ಯ ಸಲಹಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ, ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ರಾಜ್ಯ ಸರಕಾರದಿಂದ ವಿವರಣೆ ಕೇಳಿದೆ ಎಂದು ವರದಿಯಾಗಿದೆ.

ಶರಾವತಿ ಸಿಂಹ ಬಾಲದ ಸಿಂಗಳೀಕ ಅಭಯಾರಣ್ಯದಲ್ಲಿ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಷರತ್ತುಬದ್ದ ಅನುಮತಿ ಕೊಟ್ಟಿದ್ದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು, ಅರಣ್ಯ ಸಲಹಾ ಸಮಿತಿಯಿಂದಲೂ ಒಪ್ಪಿಗೆ ಪಡೆಯುವಂತೆ ನಿರ್ದೇಶನ ನೀಡಿತ್ತು.

ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಯ ಪ್ರಸ್ತಾವದಲ್ಲಿ ಪ್ರಮುಖ ಹಾಗೂ ನಿರ್ಣಾಯಕ ವಿವರಗಳೇ ಇಲ್ಲ ಎಂದು ಅಭಿಪ್ರಾಯಪಟ್ಟಿರುವ ಸಮಿತಿ, ಯೋಜನೆಯ ಒಟ್ಟು ಪರಿಣಾಮ, ಜಲಾನಯನ ಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ ಮತ್ತು ಮುಂಬರುವ ಜಲವಿದ್ಯುತ್‌ ಯೋಜನೆಗಳು, ಜಲಾನಯನ ಪ್ರದೇಶದ ಧಾರಣಾ ಶಕ್ತಿ ಸಾಮರ್ಥ್ಯದ ಬಗ್ಗೆ ಪ್ರಸ್ತಾವದಲ್ಲಿ ಬೆಳಕು ಚೆಲ್ಲಿಲ್ಲ. ಹೀಗಾಗಿ, ಕರ್ನಾಟಕ ವಿದ್ಯುತ್ ನಿಗಮವು ಪರಿಸರ ಪರಿಣಾಮ ಮೌಲ್ಯಮಾಪನದ ಭಾಗವಾಗಿ ಈ ಎರಡೂ ಅಧ್ಯಯನಗಳನ್ನು ಕೈಗೆತ್ತಿಕೊಳ್ಳುವುದು ಸೂಕ್ತ ಎಂದು ಹೇಳಿದೆ.

ಕೇಂದ್ರ ಜಲಶಕ್ತಿ ಸಚಿವಾಲಯದ ಅಧೀನದ ನೀರು ಹಾಗೂ ಇಂಧನ ಸಲಹಾ ಸಂಸ್ಥೆಯು ಈ ಹಿಂದೆ ನಡೆಸಿದ ಪರಿಸರ ಪರಿಣಾಮಗಳ ಮೌಲ್ಯಮಾಪನ ವರದಿಯು ಸಮಗ್ರವಾಗಿಲ್ಲ. ಯೋಜನೆಯಿಂದ ಸಸ್ಯ ಸಂಪತ್ತು ಹಾಗೂ ಕಾಡುಪ್ರಾಣಿಗಳ ಮೇಲಾಗುವ ಪರಿಣಾಮದ ಬಗ್ಗೆ ಪ್ರಸ್ತಾಪಿಸಿಲ್ಲ ಎಂದು ಸಮಿತಿ ತಿಳಿಸಿದೆ.

ಅರಣ್ಯ ನಾಶಕ್ಕೆ ಕಾರಣವಾಗುವ ಈ ಯೋಜನೆಗೆ ಒಪ್ಪಿಗೆ ಕೊಡಬಾರದು ಎಂದು ಅರಣ್ಯ ಸಚಿವಾಲಯದ ಪ್ರಾದೇಶಿಕ ಕಚೇರಿಯ ಉಪ ಅರಣ್ಯ ಮಹಾನಿರ್ದೇಶಕರ (ಡಿಐಜಿಎಫ್) ಸ್ಥಳ ಪರಿಶೀಲನಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು. ಈ ವರದಿಯಲ್ಲಿನ ಅಂಶಗಳನ್ನು ಉಲ್ಲೇಖಿಸಿರುವ ಸಮಿತಿಯು, ಗೇರುಸೊಪ್ಪದಿಂದ ತಳಕೊಪ್ಪಕ್ಕೆ ನಿರ್ಮಿಸಲಾಗಿರುವ ವಿದ್ಯುತ್ ಪ್ರಸರಣಾ ಮಾರ್ಗವು 1980ರ ಅರಣ್ಯ ಕಾಯ್ದೆಯ ಉಲ್ಲಂಘನೆ ಎಂದು ಸ್ಪಷ್ಟವಾಗಿ ಸಮಿತಿ ಹೇಳಿದೆ.

ಇದಲ್ಲದೆ, 12.3 ಕಿ.ಮೀ ಭೂಗತ ರಸ್ತೆ ನಿರ್ಮಿಸುವ ಮೂಲಕ 12,000 ಮರಗಳನ್ನು ಕಡಿಯುವುದನ್ನು ತಪ್ಪಿಸಲು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವಂತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ನೀಡಿರುವ ಸೂಚನೆಯನ್ನು ಪಾಲಿಸುವಂತೆ ರಾಜ್ಯ ಸರಕಾರಕ್ಕೆ ಸಮಿತಿ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X