Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗದಲ್ಲಿ ಮಲೆನಾಡ ಕರಕುಶಲ ಉತ್ಸವ,...

ಶಿವಮೊಗ್ಗದಲ್ಲಿ ಮಲೆನಾಡ ಕರಕುಶಲ ಉತ್ಸವ, ಸರಸ್ ಮೇಳ

ಮೋಹಕ ವರ್ಣಮಯ ಲೋಕವನ್ನೆ ತೆರದಿಟ್ಟಿರುವ ಫಲಪುಷ್ಪ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ24 Jan 2025 11:16 PM IST
share
ಶಿವಮೊಗ್ಗದಲ್ಲಿ ಮಲೆನಾಡ ಕರಕುಶಲ ಉತ್ಸವ, ಸರಸ್ ಮೇಳ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯತ್, ತೊಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘದ ಸಹಯೋಗದಲ್ಲಿ ಅಲ್ಲಮಪ್ರಭು ಉದ್ಯಾನವನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಮಲೆನಾಡ ಕರಕುಶಲ ಉತ್ಸವ, ಸರಸ್ ಮೇಳ ಹಾಗೂ ಪುಷ್ಪ ಸಿರಿ ಫಲಪುಷ್ಪ ಪ್ರದರ್ಶನಕ್ಕೆ ಶಾಸಕ ಎಸ್.ಎನ್.ಚನ್ನಬಸಪ್ಪ ಶುಕ್ರವಾರ ಚಾಲನೆ ನೀಡಿದರು.

ಮೋಹಕ ವರ್ಣಮಯ ಲೋಕವನ್ನೇ ತೆರದಿಟ್ಟಿರುವ ಫಲಪುಷ್ಪಗಳು, ಹೂವಿನಲ್ಲಿ ಅರಳಿದ ರಾಷ್ಟ್ರ ಕವಿ ಕುವೆಂಪುರವರ ಕವಿಶೈಲ, ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬೆ ದೇಗುಲ, ಗರಿಬಿಚ್ಚಿ ನರ್ತಿಸುತ್ತಿರುವ ನವಿಲು, ನೋಡುಗರ ಕಣ್ಮನ ಸೆಳೆಯುವ ರಂಗುರಂಗಿನ ಮತ್ಸ್ಯಗಳ ದೃಶ್ಯಗಳು, ಫಲಪುಷ್ಪ ಪ್ರದರ್ಶನ ಹಾಗೂ ಮಲೆನಾಡ ಕರಕುಶಲ ಉತ್ಸವದಲ್ಲಿ ಕಂಡು ಬಂದವು.

ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನದಲ್ಲಿ ಆರಂಭದಲ್ಲಿಯೇ ಮೇಳದ ಸ್ವಾಗತ ಕಮಾನು ಸ್ವಾಗತಿಸಿದರೆ, ಶಿವಮೊಗ್ಗವನ್ನು ಬಿಂಬಿಸುವ ಆಂಗ್ಲ ಭಾಷೆಯ ಎಸ್‌ಎಂಜಿ ಸೇವಂತಿಗೆ ಹೂವಿನಲ್ಲಿ ಕಣ್ಣು ಕುಕ್ಕುತ್ತದೆ.

ಈ ಬಾರಿ ಗುಲಾಬಿ, ಸೇವಂತಿಗೆ, ಆರ್ಕಿಡ್, ಕಾರ್ನೇಷನ್, ಲಿಲ್ಲೀಸ್, ಪೊಲೀಯೇಜ್ ಮುಂತಾದ ಬಗೆಗಳ 4.80 ಲಕ್ಷ ಹೂವುಗಳನ್ನು ಬಳಸಿ ಕುಪ್ಪಳ್ಳಿ ಕವಿ ಶೈಲದ 28 ಅಡಿ ಎತ್ತರದ ಕಲಾಕೃತಿ ಹಾಗೂ ಚಂದ್ರಗುತ್ತಿ ರೇಣುಕಾಂಬೆ ದೇವಾಲಯದ 14 ಅಡಿ ಎತ್ತರದ ಕಲಾಕೃತಿ ನಿರ್ಮಿಸಲಾಗಿದೆ. 45ಕ್ಕೂ ಹೆಚ್ಚು ಬೊನ್ಸಾಯ್ ಗಿಡಗಳ ಪ್ರದರ್ಶನವೂ ನಡೆದಿದೆ.

ಮಲೆನಾಡು ಬ್ರಾಂಡ್ ಮೂಲಕ ಹಸೆ ಚಿತ್ತಾರ, ಗೃಹ ಅಲಂಕಾರ, ಟೆರಾಕೋಟಾ ವಸ್ತು, ಖಾದಿ ಉಡುಪುಗಳು ಸೇರಿದಂತೆ ಒಳಾಂಗಣದಲ್ಲಿ 30ಕ್ಕೂ ಹೆಚ್ಚು ಮಳಿಗೆ ಹಾಗೂ ಹೋರಾಂಗಣದಲ್ಲಿ 20ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಹೇಮಂತ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಸವಿತಾ, ಜಿಪಂ ಯೋಜನಾ ನಿರ್ದೇಶಕಿ ನಂದಿನಿ, ಉದ್ಯಾನ ಕಲಾ ಸಂಘದ ಪದಾಧಿಕಾರಿಗಳು, ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಹಾಜರಿದ್ದರು.

ಮಲೆನಾಡ ಕರಕುಶಲ ಉತ್ಸವವನ್ನು ಬಹಳ ಅರ್ಥಪೂರ್ಣವಾಗಿ ಮಾಡಲಾಗಿದೆ ಹಾಗೂ ರಾಷ್ಟ್ರಕವಿ ಕುವೆಂಪುರವರ ಪುಸ್ತಕ ಪ್ರದರ್ಶನ ತುಂಬಾ ವಿಶೇಷವಾಗಿದೆ. ಈ ಉತ್ಸವ 3 ದಿನಗಳ ಕಾಲ ಯಶಸ್ವಿಯಾಗಿ ನಡೆಯಲಿ.

-ಆರ್.ಎಂ.ಮಂಜುನಾಥ ಗೌಡ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ

ನಮ್ಮ ಜಿಲ್ಲೆಯಲ್ಲಿ ಉತ್ತಮ ಕರಕುಶಲ ವಸ್ತುಗಳು ಸಿದ್ದವಾಗುತ್ತಿವೆ. ಆದರೆ ಅವುಗಳ ಮಾರಾಟ ಮಾತ್ರ ಕುಂಠಿತವಾಗಿದೆ. ಇಂತಹ ಮೇಳದಲ್ಲಿ ಆನ್‌ಲೈನ್ ಮೂಲಕ ಮಾರಾಟಕ್ಕೆ ಮುಂದಾಗಿದ್ದೇವೆ. ಇದರಿಂದ ಕಲಾವಿದರಿಗೂ ಪ್ರೋತ್ಸಾಹ ನೀಡಿದಂತಾಗುತ್ತದೆ.

-ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X