Shivamogga | ಮರಕ್ಕೆ ಕಾರು ಢಿಕ್ಕಿ: ಯುವಕ ಮೃತ್ಯು

ಅಪಘಾತದ ತೀವ್ರತೆಗೆ ಮೂರು ತುಂಡಾದ ಕಾರು
ಶಿವಮೊಗ್ಗ, ಆ.4 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹರಿಗೆ ಬಳಿ ಮಂಗಳವಾರ ಮುಂಜಾನೆ ನಡೆದಿದೆ.
ಕಾರು ಚಾಲಕ ಗುರುರಾಜ್ (22) ಮೃತಪಟ್ಟ ಯುವಕ.
ಇಂದು ಮುಂಜಾನೆ 3 ಗಂಟೆಯ ವೇಳೆ ಈ ಅಪಘಾತ ಸಂಭವಿಸಿದೆ. ಮರಕ್ಕೆ ಢಿಕ್ಕಿ ಹೊಡೆದ ರಭಸಕ್ಕೆ ಕಾರು ಮೂರು ಹೋಳಾಗಿದ್ದು, ಸಂಪೂರ್ಣ ಛಿದ್ರಗೊಂಡಿದೆ.
ಘಟನಾ ಸ್ಥಳಕ್ಕೆ ಶಿವಮೊಗ್ಗ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಈ ಸಂಬಂಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story






