Shivamogga | ನಿಯಂತ್ರಣ ತಪ್ಪಿ ಮರಕ್ಕೆ ಕಂಟೇನರ್ ಲಾರಿ ಢಿಕ್ಕಿ; ಚಾಲಕನಿಗೆ ಗಾಯ

ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಲಾರಿಯೊಂದು ಮರಕ್ಕೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಶಿವಮೊಗ್ಗ-ಸಾಗರ ರಾಷ್ಟ್ರೀಯ ಹೆದ್ದಾರಿ-69ರ ಉಳ್ಳೂರು ಕೆರೆ ಸಮೀಪ ನಡೆದಿದೆ.
ಸಾಗರ ಕಡೆಯಿಂದ ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಕಂಟೇನರ್ ಲಾರಿ ಉಳ್ಳೂರು ಕೆರೆ ಬಳಿ ಬಂದಾಗ, ರಸ್ತೆ ಬದಿಗೆ ವಾಲಿಕೊಂಡಿದ್ದ ಮರವನ್ನು ತಪ್ಪಿಸಲು ಚಾಲಕ ಯತ್ನಿಸಿದ್ದಾನೆ. ಈ ವೇಳೆ ವಾಹನದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿದೆ.
ಢಿಕ್ಕಿಯ ರಭಸಕ್ಕೆ ಕಂಟೇನರ್‌ಗೆ ಹಾನಿಯಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Next Story




