Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ‘ಎಸ್‌ಐಆರ್’ ಫಾರಂ-7ರ ದುರುಪಯೋಗ ಆರೋಪ;...

‘ಎಸ್‌ಐಆರ್’ ಫಾರಂ-7ರ ದುರುಪಯೋಗ ಆರೋಪ; ಯುವ ಕಾಂಗ್ರೆಸ್‌ನಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Oct 2026 10:54 PM IST
share
‘ಎಸ್‌ಐಆರ್’ ಫಾರಂ-7ರ ದುರುಪಯೋಗ ಆರೋಪ; ಯುವ ಕಾಂಗ್ರೆಸ್‌ನಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ : ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭ ಫಾರಂ-7 ಅರ್ಜಿಗಳ ದುರುಪಯೋಗ ನಡೆಸಲಾಗಿದೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಶಿವಪ್ಪ ನಾಯಕ ಪ್ರತಿಮೆ ಬಳಿ ಕೇಂದ್ರ ಚುನಾವಣಾ ಆಯುಕ್ತರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಯವರ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರದಲ್ಲಿ, ಭಾರತದ ಪ್ರಜಾಪ್ರಭುತ್ವದ ಮೂಲಾಧಾರವಾದ ಮತದಾನ ಪ್ರತಿಯೊಬ್ಬ ಅರ್ಹ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದೆ. ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಫಾರಂ-7 ಮೂಲಕ ಹೆಸರು ಅಳಿಸುವಿಕೆ ಅಥವಾ ಆಕ್ಷೇಪ ಸಲ್ಲಿಸಲು ಕಾನೂನುಬದ್ಧ ವ್ಯವಸ್ಥೆ ಇದೆ. ಆದರೆ ಇದೇ ವ್ಯವಸ್ಥೆಯನ್ನು ಸುಳ್ಳು, ನಕಲಿ ಅಥವಾ ಸಮರ್ಪಕವಾಗಿ ಪರಿಶೀಲಿಸದ ಆಕ್ಷೇಪಗಳಿಗಾಗಿ ದುರುಪಯೋಗಪಡಿಸಿಕೊಂಡಲ್ಲಿ ಅರ್ಹ ಮತದಾರರ ಹೆಸರು ಅನ್ಯಾಯವಾಗಿ ಅಳಿಸಲ್ಪಡುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಸಂದರ್ಭದಲ್ಲಿ ಫಾರಂ-7 ಅರ್ಜಿಗಳ ಸಂಖ್ಯೆಗೆ ಸಂಬಂಧಿಸಿದಂತೆ ವ್ಯತ್ಯಾಸಗಳು ಕಂಡುಬಂದಿರುವ ಬಗ್ಗೆ ಮಾಧ್ಯಮ ವರದಿಗಳು ಪ್ರಕಟವಾಗಿವೆ. ಆ.24ರ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ 67,307 ಫಾರಂ-7 ಅರ್ಜಿಗಳ ಮಾಹಿತಿ ಉಲ್ಲೇಖವಾಗಿದ್ದರೆ, ಸೆ.25ರಂದು ಸಿಇಒ-ಕರ್ನಾಟಕ ಕಚೇರಿಯಿಂದ ಹಂಚಲಾದ ಮಾಹಿತಿಯಲ್ಲಿ 61,130 ಅರ್ಜಿಗಳನ್ನು ಸ್ವೀಕರಿಸಿ ಪ್ರಕ್ರಿಯೆಗೊಳಿಸಿರುವುದಾಗಿ ತಿಳಿಸಲಾಗಿದೆ. ಈ ಸಂಖ್ಯೆಗಳ ನಡುವಿನ ವ್ಯತ್ಯಾಸದ ಕುರಿತು ಸ್ಪಷ್ಟ ಹಾಗೂ ಸಾರ್ವಜನಿಕ ವಿವರಣೆ ಅಗತ್ಯವಿದೆ.

ಭಾಲ್ಕಿ, ಬಬಲೇಶ್ವರ, ಮೂಡಿಗೆರೆ ಹಾಗೂ ಬೆಳಗಾವಿ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಫಾರಂ-7 ಅರ್ಜಿಗಳು ಸಲ್ಲಿಕೆಯಾಗಿರುವ ಕುರಿತು ಹಾಗೂ ಕೆಲವು ಪ್ರಕರಣಗಳಲ್ಲಿ ಒಂದೇ ವ್ಯಕ್ತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿರುವ ಕುರಿತು ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ವರದಿ ಮಾಡಿವೆ. ಇವುಗಳ ಸತ್ಯಾಸತ್ಯತೆಯನ್ನು ಸ್ವತಂತ್ರ ಹಾಗೂ ನಿಷ್ಪಕ್ಷವಾಗಿ ಪರಿಶೀಲನೆ ನಡೆಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೀಶ್, ಕರ್ನಾಟಕ ರಾಜ್ಯ ಜವಳಿ ಹಾಗೂ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ., ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ)ದ ಅಧ್ಯಕ್ಷ ಮಧುಸೂದನ್ ಸಿ.ಜಿ., ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ಹೆಗಡೆ, ಹಾಪ್ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಬಗರ್ ಹುಕುಂ ಸಮಿತಿ ಸದಸ್ಯ ಗಿರೀಶ್ ಬೂಕಳಾಪುರ, ನಗರ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷ ಎಂ.ಎಸ್. ಶಿವಕುಮಾರ್, ದಕ್ಷಿಣ ಬ್ಲಾಕ್ ಅಧ್ಯಕ್ಷ ಕಲೀಂ ಪಾಷ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಚರಣ್ ಶೆಟ್ಟಿ, ಉತ್ತರ ಬ್ಲಾಕ್ ಅಧ್ಯಕ್ಷ ಗಿರೀಶ್ ಆರ್., ದಕ್ಷಿಣ ಬ್ಲಾಕ್ ಅಧ್ಯಕ್ಷ ಸಾಕ್ಲಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಮಲಗೊಪ್ಪ, ಆಕಾಶ್, ತೌಫಿಕ್, ಬಾಬಣ್ಣ, ಅಕ್ಬರ್ ಬಾಷಾ, ನಿಖಿಲ್, ಅಬ್ದುಲ್, ಕಾರ್ತಿಕ್ ಪುರಲೆ, ಅಶೋಕ್, ಬಾಲಾಜಿ, ಹಲವು ಯುವ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

Tags

shivamogga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X