Shivamogga | ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ

ಸಾಂದರ್ಭಿಕ ಚಿತ್ರ | PC : Image by magnific
ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ. 23 ವರ್ಷದ ಯುವಕ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ಪಿಐ ಚಂದ್ರಕಲಾ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶ ನಿಂಗನಗೌಡ ಬಿ. ಪಾಟೀಲ್, ಆರೋಪಿಗೆ 20 ವರ್ಷ ಕಠಿಣ ಕಾರಾಗೃಹವಾಸ ಮತ್ತು 1,01,000 ರೂ. ದಂಡ ಹಾಗೂ ನೊಂದ ಬಾಲಕಿಗೆ 4,00,000 ರೂ. ಪರಿಹಾರವನು ನೀಡಲು ಆದೇಶಿಸಿದ್ದಾರೆ.
Next Story




