ಶಿವಮೊಗ್ಗ |ವಿದೇಶದಿಂದ ಬೆದರಿಕೆ ಕರೆ ಆರೋಪ; ಜಿಲ್ಲಾ ರಕ್ಷಣಾಧಿಕಾರಿಗೆ ಕೆ.ಎಸ್.ಈಶ್ವರಪ್ಪ ಮನವಿ

ಶಿವಮೊಗ್ಗ : ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ ಎಂದು ಆರೋಪಿಸಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಇಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
ತಮ್ಮ ಅಧಿಕೃತ ಮೊಬೈಲ್ ದೂರವಾಣಿ ಸಂಖ್ಯೆಗೆ ಜ.7ರಂದು ವಿದೇಶಿ ಮೂಲದ ಅಂತರರಾಷ್ಟ್ರೀಯ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿರುವುದಾಗಿ ಅವರು ತಿಳಿಸಿದರು. ಈ ಹಿಂದೆ ಕೂಡ ವಿದೇಶಿ ಮೂಲದಿಂದ ಜೀವ ಬೆದರಿಕೆ ಕರೆಗಳು ಬಂದಿದ್ದ ಹಿನ್ನೆಲೆ ಇರುವುದರಿಂದ, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಹಾಗೂ ತಮ್ಮ ಜೀವಕ್ಕೆ ಅಪಾಯ ಇರುವ ಕಾರಣ ಹೆಚ್ಚುವರಿ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.
ಈ ಹಿಂದೆ ಸರ್ಕಾರದಿಂದ ತಮಗೆ X ಶ್ರೇಣಿಯ ಭದ್ರತೆ ನೀಡಲಾಗಿತ್ತು. ಆದರೆ ಯಾವುದೇ ಸಕಾರಣ ನೀಡದೆ ಭದ್ರತೆಯನ್ನು Y ಶ್ರೇಣಿಗೆ ಇಳಿಸಲಾಗಿದೆ ಎಂದು ಅವರು ದೂರಿದ್ದಾರೆ. ಪ್ರಸ್ತುತವೂ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ತುರ್ತಾಗಿ ಮತ್ತೆ X ಶ್ರೇಣಿಯ ಭದ್ರತೆ ಒದಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
Next Story





