Shivamogga | ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ : ಪೊಲೀಸರಿಂದ ಪರಿಶೀಲನೆ

ಶಿವಮೊಗ್ಗ: ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಶೋಧ ಕಾರ್ಯ ನಡೆಸಿದೆ.
ಶಿವಮೊಗ್ಗ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಬಂದ ತಕ್ಷಣ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆಯು, ಶ್ವಾನದಳ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸಿದರು.
ನ್ಯಾಯಾಲಯದ ಆವರಣ, ವಿವಿಧ ಕೊಠಡಿಗಳು ಹಾಗೂ ಕಾರಿಡಾರ್‌ಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ನ್ಯಾಯಾಲಯದ ಆವರಣಕ್ಕೆ ಬರುವ ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿದರು. ಆತಂಕ ಪಡದೆ, ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರ ತಪಾಸಣಾ ಕಾರ್ಯಕ್ಕೆ ಪ್ರತಿಯೊಬ್ಬರೂ ಪೂರ್ಣ ಸಹಕಾರ ನೀಡಬೇಕು ಎಂದು ವಕೀಲರ ಸಂಘದ ಪದಾಧಿಕಾರಿಗಳಿಗೆ ಮನವಿ ಮಾಡಿದೆ.
Next Story




