ಶಿವಮೊಗ್ಗ: ಮಾರಕಾಸ್ತ್ರದಿಂದ ಕೊಚ್ಚಿ ವೃದ್ಧೆಯ ಕೊಲೆ

ಶಿವಮೊಗ್ಗ: ಮಾರಕಾಸ್ತ್ರದಿಂದ ಕೊಚ್ಚಿ ವೃದ್ಧೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿಯ ರಥಬೀದಿಯ ಮನೆಯಲ್ಲಿ ನಡೆದಿದೆ.
ಬಸಮ್ಮ (65) ಕೊಲೆಯಾದವರು. ಬಸಮ್ಮ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು.
ಶಿವಮೊಗ್ಗದಲ್ಲಿ ವಾಸವಾಗಿರುವ ಬಸಮ್ಮರ ಪುತ್ರ ಗುರುವಾರ ಮನೆಗೆ ಬಂದು ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಬಸಮ್ಮರ ಕುತ್ತಿಗೆ ಕೊಯ್ದು, ಹೊಟ್ಟೆ ಭಾಗದಲ್ಲಿ ಹಲವೆಡೆ ಇರಿಯಲಾಗಿದೆ ಎಂದು ತಿಳಿದುಬಂದಿದೆ.
ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Next Story





