Shivamogga | ಶ್ರೀಗಂಧ ಅಕ್ರಮ ಸಾಗಾಟ ಪತ್ತೆ: ಇಬ್ಬರ ಬಂಧನ

ಶಿವಮೊಗ್ಗ: ಅಕ್ರಮವಾಗಿ ಶ್ರೀಗಂಧ ಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಡಗದ್ದೆ ವಲಯಾರಣ್ಯಧಿಕಾರಿ ವಿನಯಕುಮಾರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದೆ.
ಕಣಗಲಕೊಪ್ಪ ಗ್ರಾಮದ ಸತೀಶ್ (32), ಪ್ರಕಾಶ್ (32) ಬಂಧಿತ ಆರೋಪಿಗಳು. ಇವರಿಂದ 33 ಕೆ.ಜಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಣಗಲಕೊಪ್ಪ ಗಸ್ತು ವಿಭಾಗದಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಡಿಎಫ್ಒ ಅಜ್ಜಯ್ಯ, ಎಸಿಎಫ್ ಮಧುಸೂದನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಮೇಲಿನಪಟ್ರೊಳ್ಳಿ ಗ್ರಾಮದ ಸ.ನಂ.06ರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಶ್ರೀಗಂಧ ಮರ ಕಡಿತಲೆ ಮಾಡಿ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಡಿಆರ್ಎಫ್ಒ ಅಮಿತ್, ಅರಣ್ಯ ರಕ್ಷಕ ಸಿಬ್ಬಂದಿ ಕಿರಣ್ ಕುಮಾರ್, ಮಹಾದೇವ್, ಚಾಲಕ ಅರುಣ್ ಭಾಗವಹಿಸಿದ್ದರು.
Next Story





