Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. Shivamogga | ಕೆಎಸ್‌ಒಯು ಪರೀಕ್ಷೆಯಲ್ಲಿ...

Shivamogga | ಕೆಎಸ್‌ಒಯು ಪರೀಕ್ಷೆಯಲ್ಲಿ ನಕಲು ಆರೋಪ; ಹಣ ಕೊಟ್ರೆ ಮೊಬೈಲ್, ಬುಕ್ಸ್ ನೋಡಿ ಪರೀಕ್ಷೆ ಬರೆಯಬಹುದು..!

ವಾರ್ತಾಭಾರತಿವಾರ್ತಾಭಾರತಿ23 Oct 2026 4:01 PM IST
share
Shivamogga | ಕೆಎಸ್‌ಒಯು ಪರೀಕ್ಷೆಯಲ್ಲಿ ನಕಲು ಆರೋಪ; ಹಣ ಕೊಟ್ರೆ ಮೊಬೈಲ್, ಬುಕ್ಸ್ ನೋಡಿ ಪರೀಕ್ಷೆ ಬರೆಯಬಹುದು..!

ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯಲ್ಲಿ ಹಣ ಪಡೆದು ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡುತ್ತಿರುವ ಬೃಹತ್ ಅಕ್ರಮ ಬಯಲಾಗಿದೆ. ಒಂದು ವಿಷಯಕ್ಕೆ 1,000 ರೂ. ನೀಡಿದ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಪುಸ್ತಕ ನೋಡಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವಿವಾದದ ಬೆನ್ನಲ್ಲೇ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಪರೀಕ್ಷಾ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಣ ಪಡೆದು ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಪುಸ್ತಕ ಹಾಗೂ ಮೊಬೈಲ್ ಬಳಸಿ ಉತ್ತರ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಶಿವಮೊಗ್ಗದ ಆಲ್ಕೋಳ ವೃತ್ತದ ಸಮೀಪದಲ್ಲಿರುವ ಕೆಎಸ್‌ಒಯು ಪ್ರಾದೇಶಿಕ ಕಚೇರಿಯೇ ಈ ಪರೀಕ್ಷಾ ಕೇಂದ್ರವಾಗಿದೆ. ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಅವರ ನೇತೃತ್ವದಲ್ಲಿ ಹಣ ಪಡೆದು ಸಾಮೂಹಿಕ ನಕಲು ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಆದರೆ, ಈ ಆರೋಪಗಳ ಕುರಿತು ಅಧಿಕೃತ ತನಿಖೆ ಅಥವಾ ಸಂಬಂಧಪಟ್ಟ ಅಧಿಕಾರಿಗಳ ಸ್ಪಷ್ಟನೆ ಲಭ್ಯವಾಗಿದೆಯೇ ಎಂಬುದು ದೃಢಪಡಬೇಕಿದೆ.

ಆರೋಪಗಳ ಪ್ರಕಾರ, ಹಣ ನೀಡಿದ ವಿದ್ಯಾರ್ಥಿಗಳಿಗೆ ಎರಡನೇ ಮಹಡಿಯಲ್ಲಿ ಪುಸ್ತಕ ಮತ್ತು ಮೊಬೈಲ್ ಬಳಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿತ್ತು. ಹಣ ನೀಡದ ವಿದ್ಯಾರ್ಥಿಗಳಿಗೆ ಮೊದಲ ಮಹಡಿಯಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಪುಸ್ತಕ ಹಾಗೂ ಮೊಬೈಲ್ ನೋಡಿಕೊಂಡು ಉತ್ತರ ಬರೆಯುತ್ತಿರುವ ದೃಶ್ಯಗಳು ಸೆರೆಯಾಗಿವೆ ಎಂದು ವರದಿಯಾಗಿದೆ. ಸಿಬ್ಬಂದಿಯನ್ನು ಬಳಸಿಕೊಂಡು ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸಿ, ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಅಕ್ಟೋಬರ್ 7 ರಿಂದ ಆರಂಭವಾಗಿರುವ ಮುಕ್ತ ವಿವಿಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನವೆಂಬರ್ 20 ರವರೆಗೆ ನಡೆಯಲಿವೆ. ದಿನರಾತ್ರಿ ಕಷ್ಟಪಟ್ಟು ಓದಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪರಿಶ್ರಮವನ್ನು ಈ ಭ್ರಷ್ಟ ಜಾಲ ಮಣ್ಣುಪಾಲು ಮಾಡುತ್ತಿದೆ. ತಕ್ಷಣವೇ ಉನ್ನತ ಶಿಕ್ಷಣ ಇಲಾಖೆ ಹಾಗೂ ಕೆಎಸ್‌ಒಯು ಕುಲಪತಿಗಳು ಈ ಕೇಂದ್ರದ ಮೇಲೆ ದಾಳಿ ನಡೆಸಿ, ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags

shivamoggaKSOU
share
ವಾರ್ತಾಭಾರತಿ
ವಾರ್ತಾಭಾರತಿ
Next Story
X