Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. Shivamogga | ನಕಲಿ ಚಿನ್ನಾಭರಣ ನೀಡಿ...

Shivamogga | ನಕಲಿ ಚಿನ್ನಾಭರಣ ನೀಡಿ ಲಕ್ಷಾಂತರ ರೂ.ವಂಚನೆ: ದೊಡ್ಡಪೇಟೆಯಲ್ಲಿ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ3 July 2026 11:20 PM IST
share
Shivamogga | ನಕಲಿ ಚಿನ್ನಾಭರಣ ನೀಡಿ ಲಕ್ಷಾಂತರ ರೂ.ವಂಚನೆ: ದೊಡ್ಡಪೇಟೆಯಲ್ಲಿ ಪ್ರಕರಣ ದಾಖಲು

ಶಿವಮೊಗ್ಗ: ನನಗೆ ತುರ್ತು ಹಣದ ಅಗತ್ಯವಿದೆ ಎಂದು ನಂಬಿಸಿ, ನಕಲಿ ಚಿನ್ನಾಭರಣಗಳನ್ನು ಕೊಟ್ಟು ಲಕ್ಷಾಂತರ ರೂ. ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ದೂರುದಾರರು ಶಿವಮೊಗ್ಗದ ಖಾಸಗಿ ಬಸ್ ಕಂಪೆನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು. ಇವರಿಗೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆಯೊಂದು ಬಂದಿದ್ದು, ಕರೆ ಮಾಡಿದ ಆರೋಪಿಯು ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ನಾನು ಹಿಂದೆ ಇದೇ ಟ್ರಾವೆಲ್ಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿದ್ದೆ ಎಂದು ಮ್ಯಾನೇಜರ್ ಹೇಳಿ ಅವರಲ್ಲಿ ನಂಬಿಕೆ ಹುಟ್ಟಿಸಿದ್ದಾನೆ. ನಂತರ ಆತ ತನಗೆ ಮಡಿಕೆಯಲ್ಲಿ ಚಿನ್ನ ಸಿಕ್ಕಿರುವ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದಾನೆ.

ಆರೋಪಿಯು ತಾನು ಪ್ರಸಕ್ತ ವಿಜಯವಾಡದಲ್ಲಿ ಟೆಲಿಫೋನ್ ಕೇಬಲ್ ಕೆಲಸ ಮಾಡಿಕೊಂಡಿರುವುದಾಗಿ ಹೇಳಿದ್ದಾನೆ. ಅಲ್ಲಿ ಕೆಲಸದ ನಿಮಿತ್ತ ಗುಂಡಿ ಅಗೆಯುತ್ತಿದ್ದಾಗ ತನಗೆ ಮಡಿಕೆಯೊಂದರಲ್ಲಿ ಸುಮಾರು 3 ಕೆಜಿ ತೂಕದ ಚಿನ್ನದ ಸರಗಳು ಸಿಕ್ಕಿವೆ ಎಂದು ನಂಬಿಸಿದ್ದಾನೆ. ಪ್ರಸಕ್ತ ತನಗೆ ಹಣದ ತುರ್ತು ಇರುವುದರಿಂದ ಆ ಚಿನ್ನವನ್ನು ಅತ್ಯಂತ ಕಡಿಮೆ ಬೆಲೆಗೆ ಕೊಡುವುದಾಗಿ ಮ್ಯಾನೇಜರ್‌ಗೆ ಆಮಿಷ ಒಡ್ಡಿದ್ದಾನೆ. ಇದನ್ನು ನಿಜವೆಂದು ನಂಬಿದ ದೂರುದಾರರು ಚಿನ್ನವನ್ನು ನೋಡಲು ಒಪ್ಪಿದ್ದಾರೆ.

ಇದಾದ ಬಳಿಕ, ಶಿವಮೊಗ್ಗದ ಹಳೇ ಮಂಡ್ಲಿಯ ಖಾಲಿ ಜಾಗವೊಂದರಲ್ಲಿ ಆರೋಪಿ ಮ್ಯಾನೇಜರ್‌ಗೆ 2 ಗ್ರಾಂ ಚಿನ್ನದ ಮಣಿಗಳನ್ನು ಸ್ಯಾಂಪಲ್ ಆಗಿ ನೀಡಿದ್ದಾರೆ. ಅದನ್ನು ಪರೀಕ್ಷಿಸಿದಾಗ ಅದು ಶೇ. 92ರಷ್ಟು ಶುದ್ಧ ಇರುವುದು ದೃಢಪಟ್ಟಿದೆ. ನಂತರ ದೂರುದಾರ ತಮ್ಮ ಬಳಿ ಸದ್ಯಕ್ಕೆ 10 ಲಕ್ಷ ರೂ. ಮಾತ್ರ ಇರುವುದಾಗಿ ತಿಳಿಸಿದಾಗ, ಅಷ್ಟಕ್ಕೇ 1.5 ಕೆಜಿ ಚಿನ್ನ ಕೊಡುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

ಹಣ ಹೊಂದಿಸಲು ಮುಂದಾದ ದೂರುದಾರ ಹಾಗೂ ಅವರ ಸ್ನೇಹಿತ ತಮ್ಮಲ್ಲಿದ್ದ ಒಡವೆಗಳನ್ನು ಅಡವಿಟ್ಟು 10 ಲಕ್ಷ ರೂ. ನಗದು ಹೊಂದಿಸಿಕೊಂಡಿದ್ದಾರೆ. ಹಳೇ ಮಂಡ್ಲಿಯ ಅದೇ ಖಾಲಿ ಜಾಗದಲ್ಲಿ ದೂರುದಾರ ಮತ್ತು ಅವರ ಸ್ನೇಹಿತರು 10 ಲಕ್ಷ ರೂ. ಹಣವನ್ನು ಆರೋಪಿ ಹಾಗೂ ಆತನ ಇಬ್ಬರು ಸಹಚರರಿಗೆ ನೀಡಿದ್ದಾರೆ. ಹಣ ಪಡೆದ ಆರೋಪಿಗಳು, ನೀಲಿ ಬಣ್ಣದ ಚೀಲದಲ್ಲಿದ್ದ ಚಿನ್ನದ ಬಣ್ಣದ ಒಡವೆಗಳನ್ನು ಮ್ಯಾನೇಜರ್ ಕೈಗಿಟ್ಟು, ಇಲ್ಲಿಂದ ತಕ್ಷಣವೇ ಬೇಗ ಹೋಗುವಂತೆ ಹೇಳಿ ಅಲ್ಲಿಂದ ಕಳುಹಿಸಿದ್ದಾರೆ. ತದನಂತರ ಆ ಒಡವೆಗಳನ್ನು ತಂದು ಸೂಕ್ಷ್ಮವಾಗಿ ಪರೀಕ್ಷಿಸಿದಾಗ ಅವು ನಕಲಿ ಬಂಗಾರ ಎಂಬ ಸತ್ಯ ಬೆಳಕಿಗೆ ಬಂದಿದೆ.

ತಕ್ಷಣವೇ ಎಚ್ಚೆತ್ತ ದೂರುದಾ ಆರೋಪಿಯ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದ್ದವು. ಅಸಲಿ ಬಂಗಾರ ನೀಡುವುದಾಗಿ ನಂಬಿಸಿ 10 ಲಕ್ಷ ರೂ. ಹಣವನ್ನು ಪಡೆದುಕೊಂಡು ಪರಾರಿಯಾಗಿದ್ದಾರೆ.

ಈ ಸಂಬಂಧ ದೊಡ್ಡಪೇಟೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

shivamoggaFake Gold Jewelry
share
ವಾರ್ತಾಭಾರತಿ
ವಾರ್ತಾಭಾರತಿ
Next Story
X