Shivamogga | ಹುಲಿಕಲ್ ಘಾಟ್ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣುಕುಸಿತ; ಮೂವರು ಕಾರ್ಮಿಕರು ಮೃತ್ಯು

ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಸನಗರ ತಾಲೂಕು ಹುಲಿಕಲ್ ಘಾಟ್ ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ತಿರುವಿನಲ್ಲಿ ನಡೆದಿದೆ.
ಮೃತರನ್ನು ನಗರ ಸಮೀಪದ ಚಕ್ಕಾರು ಗ್ರಾಮದ ರಾಘು, ಹಾವೇರಿ ಜಿಲ್ಲೆಯ ನೆಲಗಲ್ಲು ಗ್ರಾಮದ ಶಬ್ಬೀರ್, ರಾಜು ಎಂದು ಗುರುತಿಸಲಾಗಿದೆ.
ಹುಲಿಕಲ್ ಘಾಟ್ ( ಬಾಳೆಬರೆ ಘಾಟ್, ರಾಜ್ಯ ಹೆದ್ದಾರಿ 52) ಹೇರ್ ಪಿನ್ ತಿರುವಿನಲ್ಲಿ ಈ ಹಿಂದೆ ಭೂಕುಸಿತ ಸಂಭವಿಸಿತ್ತು. ಈ ಹಿನ್ನಲೆಯಲ್ಲಿ ಶಾಶ್ವತ ಬೃಹತ್ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕಾರ್ಮಿಕರ ಮೇಲೆ ಮಣ್ಣು ಜಾರಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ಕಾರ್ಮಿಕರು ಗಾಯಗೊಂಡಿರುವ ಶಂಕೆ ಇದೆ.
ಮಣ್ಣಿನ ಅಡಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಗರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.
Next Story





