Shivamogga | ಜೀವಾವಧಿ ಶಿಕ್ಷೆಗೆ ಒಳಗಾಗಿ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಮೃತ್ಯು

ಸಾಂದರ್ಭಿಕ ಚಿತ್ರ | PC : PTI
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಕಾರಾಗೃಹದ ಕೈದಿಯೊಬ್ಬ ಮಂಗಳವಾರ ಬೆಳಗಿನ ಜಾವ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಹೊಸನಗರ ತಾಲೂಕಿನ ಗರ್ತಿಕೆರೆ, ಅಮೃತ ಗ್ರಾಮದ ಕೃಷ್ಣ (44) ಎಂದು ಗುರುತಿಸಲಾಗಿದೆ.
ಕೃಷ್ಣ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಹಲವು ಬಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ. ಡಿ.5ರಂದು ಸಂಜೆ ಕೃಷ್ಣನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣ ಮಂಗಳವಾರ ಬೆಳಗಿನ ಜಾವ 2 ಗಂಟೆಗೆ ಮೃತಪಟ್ಟಿದ್ದಾನೆ ಎಂದು ಜೈಲು ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೃಷ್ಣನಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





