ಶಿವಮೊಗ್ಗ | ಬೈಕ್‌ಗೆ ಲಾರಿ ಢಿಕ್ಕಿ : ಓರ್ವ ಮೃತ್ಯು, ಇನ್ನೋರ್ವನಿಗೆ ಗಾಯ

ಶಿವಮೊಗ್ಗ : ಬೈಕ್‌ಗೆ ಲಾರಿ ಢಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ನಡೆದಿದೆ.
ಶಿರಾಳಕೊಪ್ಪ ಸಮೀಪದ ಸುಣ್ಣದಕೊಪ್ಪದ ಬಳಿ ಈ ದುರ್ಘಟನೆ ನಡೆದಿದ್ದು, ರಾಗಿಕೊಪ್ಪ ತಾಂಡಾದ ನಿವಾಸಿಗಳಾದ ಇಬ್ಬರು ಯುವಕರು ಬಸವನಂದಿಹಳ್ಳಿಯಲ್ಲಿ ನಡೆದ ಹೋರಿ ಹಬ್ಬವನ್ನು ವೀಕ್ಷಿಸಿ ಊರಿಗೆ ವಾಪಸಾಗುತ್ತಿದ್ದ ವೇಳೆ ಲಾರಿ ಬೈಕ್‌ಗೆ ಢಿಕ್ಕಿ ಹೊಡೆದಿದ್ದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಪುನೀತ್ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಜೀವ್ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಶಿವಮೊಗ್ಗದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
Next Story





