ಶಿವಮೊಗ್ಗ : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ

ಶಿವಮೊಗ್ಗ : ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ವ್ಯಕ್ತಿಯೊಬ್ಬನನ್ನ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕುಂಸಿ ನಿವಾಸಿ ವಸಂತ್(32) ಕೊಲೆಯಾದ ವ್ಯಕ್ತಿ. ಕುಂಸಿ ಗ್ರಾಮದ ಚಿಕ್ಕಮರಸ ರಸ್ತೆಯಲ್ಲಿ ಕೊಲೆ ಮಾಡಲಾಗಿದೆ. ಇಬ್ಬರು ಪರಿಚಿತರು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅಕ್ರಮ ಸಂಬಂಧದ ಶಂಕೆಯಿಂದ ಈ ಕೊಲೆ ನಡೆದಿರಬಹುದು ಎನ್ನಲಾಗುತ್ತಿದೆ.
ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಿದ್ದಾರೆ.
ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.
Next Story