Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. Shivamogga | ಶಾಸಕ ಚನ್ನಬಸಪ್ಪರನ್ನು...

Shivamogga | ಶಾಸಕ ಚನ್ನಬಸಪ್ಪರನ್ನು ಹೆಗಲ ಮೇಲೆ ಹೊತ್ತು ಕುಣಿದ ಪೊಲೀಸರು; ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ವರ್ಗಾವಣೆ

ವಾರ್ತಾಭಾರತಿವಾರ್ತಾಭಾರತಿ16 Sept 2026 5:01 PM IST
share
Shivamogga | ಶಾಸಕ ಚನ್ನಬಸಪ್ಪರನ್ನು ಹೆಗಲ ಮೇಲೆ ಹೊತ್ತು ಕುಣಿದ ಪೊಲೀಸರು; ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ವರ್ಗಾವಣೆ

ಶಿವಮೊಗ್ಗ : ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ, ಶಾಸಕ ಎಸ್.ಎನ್.ಚನ್ನಬಸಪ್ಪ ಅವರನ್ನು ಹೆಗಲ ಮೇಲೆ ಹೊತ್ತು ಕುಣಿದಿದ್ದ ಇಬ್ಬರು ಟ್ರಾಫಿಕ್ ಪೊಲೀಸರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೆ, ಶಿಸ್ತು ಕ್ರಮದ ಭಾಗವಾಗಿ ಆ ಇಬ್ಬರು ಸಿಬ್ಬಂದಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ನಗರದ ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗಿತ್ತು. ಇದರ ವಿಸರ್ಜನಾ ಪೂರ್ವ ಮೆರವಣಿ ಹಮ್ಮಿಕೊಳ್ಳಲಾಗಿತ್ತು. ನಗರದ ಕೋಟೆ ಶ್ರೀ ಭೀಮೇಶ್ವರ ದೇವಾಲಯದ ಬಳಿ ಮೆರವಣಿಗೆ ಸಾಗುತ್ತಿದ್ದ ವೇಳೆ ಶಾಸಕ ಚನ್ನಬಸಪ್ಪರವರು ಜೊತೆಯಾಗಿದ್ದರು. ಈ ವೇಳೆ ಶಾಸಕರನ್ನು ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಗಣೇಶ್ ಹಾಗೂ ಪ್ರಕಾಶ್.ಎ.ಕೆ ಅವರು ಹೆಗಲ ಮೇಲೆ ಹೊತ್ತುಕೊಂಡು ಡ್ಯಾನ್ಸ್ ಮಾಡಿದ್ದರು. ಇದರ ವಿಡಿಯೋ ತುಣುಕು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದರ ಬೆನ್ನಲ್ಲೆ ಈ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಗಣೇಶ್ ಅವರನ್ನು ತೀರ್ಥಹಳ್ಳಿಯ ಆಗುಂಬೆ ಪೊಲೀಸ್ ಠಾಣೆಗೆ, ಪ್ರಕಾಶ್.ಎ.ಕೆ ರನ್ನು ಸೊರಬದ ಆನವಟ್ಟಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲು ಎಸ್ಪಿ ಬಿ.ನಿಖಿಲ್ ಆದೇಶ ಹೊರಡಿಸಿದ್ದಾರೆ.

Tags

ShivamoggaPoliceMLA Channabasappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X