ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಢಿಕ್ಕಿ; ಇಬ್ಬರು ಮೃತ್ಯು

ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ತಾಲೂಕಿನ ಗಾಜನೂರು ಸಮೀಪದ ಅಗ್ರಹಾರ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಮೃತರನ್ನು ಬಸ್ ಕಂಡಕ್ಟರ್ ಅಣ್ಣಪ್ಪ(40),ಚಳ್ಳಕೆರೆಯ ಹರ್ಷಿತ(35) ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಚಳ್ಳಕೆರೆಗೆ ಹೋಗುವ ದುರ್ಗಾಂಬಾ ಹೆಸರಿನ ಖಾಸಗಿ ಬಸ್ ಗಾಜನೂರು ಸಮೀಪದ ಅಗ್ರಹಾರ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬಂದಿಯಿಂದ ಢಿಕ್ಕಿ ಹೊಡೆದಿದೆ. 15 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story





