ಶಿವಮೊಗ್ಗ | ವಿಟಮಿನ್ ಮಾತ್ರೆ ಸೇವಿಸಿದ ಶಾಲಾ ಮಕ್ಕಳಿಗೆ ಹೊಟ್ಟೆನೋವು, ವಾಂತಿ; 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಸಾಂದರ್ಭಿಕ ಚಿತ್ರ (AI)
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಸರಕಾರಿ ಶಾಲೆಯ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಅಸ್ವಸ್ಥರಾದ ಘಟನೆ ವರದಿಯಾಗಿದೆ.
ಮಂಗಳವಾರ ಮಧ್ಯಾಹ್ನ ಊಟದ ಬಳಿಕ ಶಿಕ್ಷಕರು ಮಕ್ಕಳಿಗೆ ವಿಟಮಿನ್ ಐರನ್ ಮಾತ್ರೆ ವಿತರಿಸಿದ್ದರು. ಇದನ್ನು ನುಂಗಿದ ಬಳಿಕ ಮಕ್ಕಳು ಹೊಟ್ಟೆ ನೋವು ಎಂದು ವಾಂತಿ ಮಾಡಿಕೊಂಡಿದ್ದಾರೆ.
ತಕ್ಷಣವೇ ಶಿಕ್ಷಕರು ಮತ್ತು ಪೋಷಕರು 53 ಮಕ್ಕಳನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ಕರೆತಂದಿದ್ದಾರೆ. ಚಿಕಿತ್ಸೆ ಮುಂದುವರಿದಿದ್ದು, ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಭದ್ರಾವತಿ ಬಿಇಒ ನಾಗೇಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
Next Story





