ಶಿವಮೊಗ್ಗ : ಟ್ಯಾಂಕರ್-ದ್ವಿಚಕ್ರ ವಾಹನ ಢಿಕ್ಕಿ ವಿದ್ಯಾರ್ಥಿನಿ ಮೃತ್ಯು

ಶಿವಮೊಗ್ಗ : ನೀರು ಸಾಗಾಟದ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಕಾರ್ಕಳ ಮೂಲದ ಲಾವಣ್ಯಾ (25) ಎಂದು ಗುರುತಿಸಲಾಗಿದೆ ದ್ವಿಚಕ್ರ ವಾಹನದಲ್ಲಿದ್ದ ಮತ್ತೋರ್ವ ಯುವತಿಯೂ ಗಂಭೀರ ಗಾಯಗೊಂಡಿದ್ದು, ಆಸತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ನಲ್ಲಿ ನೀರು ಪೂರೈಕೆ ಮಾಡುತ್ತಿರುವ ವೇಳೆ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಸಂಬಂಧ ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





