ಶಿವಮೊಗ್ಗ | ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ : ಶಿವಮೊಗ್ಗ ನಗರದ ಹೊರವಲಯದ ಗೋಂದಿ ಚಟ್ನಳ್ಳಿ ಗ್ರಾಮದ ಸಮೀಪ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ನಿವಾಸಿ ಅಸಾದುಲ್ಲಾ (50) ಮತ್ತು ಉತ್ತರ ಪ್ರದೇಶದ ಮೂಲದ ಸಾದಿಕ್ (30) ಹಾಗೂ ಫಿರೋಜ್ (22) ಎಂದು ಗುರುತಿಸಲಾಗಿದೆ.
ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Next Story





