SHIVAMOGGA | ಕರ್ತವ್ಯದಲ್ಲಿದ್ದ ಎಎಸ್ಸೈಯವರ ಮಾಂಗಲ್ಯ ಸರವನ್ನೇ ಎಗರಿಸಿದ ಕಳ್ಳರು

ಶಿವಮೊಗ್ಗ: ಕರ್ತವ್ಯ ನಿರತ ಎಎಸ್ಸೈ ಮಾಂಗಲ್ಯ ಸರವನ್ನೇ ಕಳ್ಳರು ಕದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಪ್ರತಿಭಟನೆಯ ಹಿನ್ನೆಲೆ ಶಿವಮೊಗ್ಗ ಬಿಜೆಪಿ ಕಚೇರಿಗೆ ಬಂದೋಬಸ್ತ್ಗೆಂದು ಎಎಸ್ಸೈ ಅಮೃತಾಬಾಯಿ ಬಂದಿದ್ದರು. ಪ್ರತಿಭಟನೆಯ ವೇಳೆ ಕಳ್ಳರು ಕೈಚಳಕ ತೋರಿದ್ದು, ಅವರ ಕತ್ತಲ್ಲಿದ್ದ 60 ಗ್ರಾಂ ಮಾಂಗಲ್ಯಸರವನ್ನು ಎಗರಿಸಿದ್ದಾರೆ. ಪೊಲೀಸ್ ಅಧಿಕಾರಿ ಎಂಬ ಭಯವೂ ಇಲ್ಲದೆ ಕಳ್ಳರು ಕೃತ್ಯ ನಡೆಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story





