Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. Shivamogga | ಹುಲಿಕಲ್ ಘಾಟ್‌ನಲ್ಲಿ...

Shivamogga | ಹುಲಿಕಲ್ ಘಾಟ್‌ನಲ್ಲಿ ಮಣ್ಣುಕುಸಿತ : ಮಣ್ಣಿನಡಿ ಸಿಲುಕಿದ್ದ ಮೂವರು ಕಾರ್ಮಿಕರ ಮೃತದೇಹ ಪತ್ತೆ

ReshmaReshma10 April 2026 11:44 AM IST
share
Shivamogga | ಹುಲಿಕಲ್ ಘಾಟ್‌ನಲ್ಲಿ ಮಣ್ಣುಕುಸಿತ : ಮಣ್ಣಿನಡಿ ಸಿಲುಕಿದ್ದ ಮೂವರು ಕಾರ್ಮಿಕರ ಮೃತದೇಹ ಪತ್ತೆ

ಶಿವಮೊಗ್ಗ: ಜಿಲ್ಲೆಯ ಹುಲಿಕಲ್ (ಬಾಳೇಬರೆ) ಘಾಟ್‌ನ ಹೇರ್‌ಪಿನ್ ಕ್ರಾಸ್‌ನಲ್ಲಿ ಕಾಂಕ್ರೀಟ್ ವಾಲ್ ಕಾಮಗಾರಿ ವೇಳೆ ಸಂಭವಿಸಿದ ಮಣ್ಣುಕುಸಿತದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿವೆ.

ಎಸ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಪತ್ತೆ ಹಚ್ಚಿದ್ದಾರೆ. ಹೊಸನಗರ ಹೋಬಳಿಯ ಚಕ್ಕಾರು ಗ್ರಾಮದ ರಾಘವೇಂದ್ರ, ಹಾವೇರಿ ಜಿಲ್ಲೆಯ ಶಬ್ಬೀರ್ (40) ಹಾಗೂ ರಾಜು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಎರಡು ಮೃತದೇಹಗಳು ಪತ್ತೆಯಾಗಿದ್ದರೆ, ಇಂದು ಬೆಳಗ್ಗೆ ಸುಮಾರು 3 ಗಂಟೆ ಸುಮಾರಿಗೆ ಶಬ್ಬೀರ್ ಅವರ ಮೃತದೇಹ ಪತ್ತೆಯಾಗಿದೆ.

ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಮೃತದೇಹಗಳನ್ನು ನಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಶಾಸಕ ಆರಗ ಭೇಟಿ :

ಘಟನಾ ಸ್ಥಳಕ್ಕೆ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಡೆಯಬಾರದ ಘಟನೆ ನಡೆದಿದೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೊರಕಲಿ. ಅವರ ಜೊತೆ ನಾವು ಇರುತ್ತೇವೆ” ಎಂದು ಸಾಂತ್ವನ ಹೇಳಿದರು.

ಹುಲಿಕಲ್ ಘಾಟ್ ನಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ :

ಭೂ ಕುಸಿತ ಸಂಭವಿಸಿದ ಬೆನ್ನಲ್ಲೇ ರಾಜ್ಯ ಹೆದ್ದಾರಿ-52 ರ ಹುಲಿಕಲ್ ಘಾಟ್ ನಲ್ಲಿ ಸಂಚಾರ ಸಂಪೂರ್ಣ ನಿಷೇಧ ಹೇರಲಾಗಿದೆ.

ಶಿವಮೊಗ್ಗ- ತೀರ್ಥಹಳ್ಳಿ- ನಗರ- ಹುಲಿಕಲ್ ಘಾಟ್- ಕುಂದಾಪುರ ಸಂಪರ್ಕಿಸುವ ರಸ್ತೆ ಇದಾಗಿದ್ದು, ಭಾರೀ ಪ್ರಮಾಣದಲ್ಲಿ ಭೂ ಕುಸಿತ ಆಗಿರುವ ಹಿನ್ನೆಲೆ- ಸಂಚಾರ ನಿಷೇಧ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಹುಲಿಕಲ್ ಘಾಟಿಯಲ್ಲಿ ಸಂಚಾರ ರದ್ದು ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಬಳಿಯ ಹುಲಿಕಲ್ ಘಾಟ್ ಕ‌ರಾವಳಿ ಮತ್ತು ಮಧ್ಯ ಕರ್ನಾಟಕಕ್ಕೆ ಸಂಪರ್ಕ ಕೊಂಡಿಯಾಗಿತ್ತು. ತೀರ್ಥ ಹಳ್ಳಿಯ ಆಗುಂಬೆ ಘಾಟ್ ಮತ್ತು ಹೊಸನಗರ ತಾಲೂಕಿನ ನಿಟ್ಟೂರು ನಾಗೋಡಿ ಘಾಟ್ ನಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ ನೀಡಿದ್ದು, ವಾಹನ ಸವಾರರು ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.








Tags

Hulikal Ghatshivamogga
share
Reshma
Reshma
Next Story
X