ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪಿಎಸ್‌ಐಗಳ ವರ್ಗಾವಣೆ

ಶಿವಮೊಗ್ಗ : ಜಿಲ್ಲೆಯ ವಿವಿಧ ಠಾಣೆಯ ಪೊಲೀಸ್ ಸಬ್ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ.
ರಿಪ್ಪನ್ ಪೇಟೆಯ ಪಿಎಸ್‌ಐ ಪ್ರವೀಣ್ ಎಸ್ ಪಿಯವರನ್ನು ಅನಂದಪುರ ಪೊಲೀಸ್ ಠಾಣೆಗೆ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಆನಂದಪುರ ಠಾಣೆ ಪಿಎಸ್‌ಐ ಯುವರಾಜ್‌ರವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಜು ರೆಡ್ಡಿ ಬೆನ್ನೂರು ಅವರನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಕಾರ್ಗಲ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಹೊಳೆಬಸಪ್ಪ ಹೊಳಿರವರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಕಾರ್ಗಲ್ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಸೊರಬ ಪೊಲೀಸ್ ಠಾಣೆಯ ನಾಗರಾಜ್‌ರವರನ್ನು ವರ್ಗಾವಣೆಗೊಳಿಸಲಾಗಿದೆ.
ಹೊಳೆಹೊನ್ನೂರು ಪೊಲೀಸ್ ಠಾಣೆಯ ಮಂಜುನಾಥ್ ಕುರಿರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಠಾಣೆಗೆ ವರ್ಗಾಯಿಸಲಾಗಿದೆ. ಆಗುಂಬೆ ಠಾಣೆಯ ರಂಗನಾಥ್ ಅಂತರಗಟ್ಟಿರವರನ್ನು ಹಾವೇರಿ ಜಿಲ್ಲೆಯ ಸವಣೂರು ಠಾಣೆಗೆ ವರ್ಗಾಯಿಸಲಾಗಿದೆ. ಶಿವಮೊಗ್ಗದ ಸಿ ಇಎನ್ ಠಾಣೆಯ ಶಿವನಗೌಡರವರನ್ನು ಆಗುಂಬೆ ಠಾಣೆಗೆ ವರ್ಗಾಯಿಸಲಾಗಿದೆ.
ಭದ್ರಾವತಿ ಓಲ್ಡ್ ಟೌನ್ ಪಿಎಸ್‌ಐ ಚಂದ್ರಶೇಖರ್ ನಾಯ್ಕ್ ಅವರನ್ನು ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಬಿ ಸಿ ಅವರನ್ನು ತೀರ್ಥಹಳ್ಳಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.