ಶಿವಮೊಗ್ಗ | ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಡಿಜಿ-ಐಜಿಪಿ ಪ್ರಶಂಸಾ ಪದಕ

ಎ.ಜಿ. ಕಾರ್ಯಪ್ಪ | ದಿಲೀಪ್ ಎಸ್.ವಿ.
ಶಿವಮೊಗ್ಗ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ನೀಡಲಾಗುವ ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕಕ್ಕೆ ಶಿವಮೊಗ್ಗದ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.
ಶಿವಮೊಗ್ಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಎ.ಜಿ. ಕಾರ್ಯಪ್ಪ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ದಿಲೀಪ್ ಎಸ್.ವಿ. ಅವರಿಗೆ ಈ ಪದಕ ಲಭಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಈ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ದಿಲೀಪ್ ಎಸ್.ವಿ. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಿಂಗಳ ಗ್ರಾಮದವರು.
ರಾಜ್ಯಮಟ್ಟದಲ್ಲಿ ಸಮರ್ಥ ಸೇತು ವಿದ್ಯಾರ್ಥಿ ಪೊಲೀಸ್ ಕಾರ್ಯಕ್ರಮವನ್ನು ಎಸ್ಪಿ ಮಾರ್ಗದರ್ಶನದಲ್ಲಿ ಮಾಡಿರುತ್ತಾರೆ.
Next Story




