Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. SHIVAMOGGA | ಆನೆ ದಾಳಿಗೆ ತೆಂಗು,...

SHIVAMOGGA | ಆನೆ ದಾಳಿಗೆ ತೆಂಗು, ಅಡಿಕೆ ಮರಗಳು ನಾಶ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ18 Feb 2026 11:57 AM IST
share
SHIVAMOGGA | ಆನೆ ದಾಳಿಗೆ ತೆಂಗು, ಅಡಿಕೆ ಮರಗಳು ನಾಶ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಶಿವಮೊಗ್ಗ: ತಾಲೂಕಿನ ಪುರದಾಳು ಗ್ರಾಮದಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಒಂಟಿ ಸಲಗವೊಂದು ರೈತರ ಅಡಿಕೆ ಹಾಗೂ ತೆಂಗಿನ ತೋಟವನ್ನು ನಾಶಪಡಿಸಿದೆ.

ಮಂಗಳವಾರ ರಾತ್ರಿ ಪುರದಾಳು ಗ್ರಾಮದ ಬೇಳೂರು ಬಳಿ ಒಂಟಿ ಸಲಗ ರೈತರ ತೋಟಕ್ಕೆ ನುಗ್ಗಿ ಅಡಿಕೆ-ತೆಂಗಿನ ಗಿಡಗಳನ್ನು ಧ್ವಂಸ ಮಾಡಿದೆ.

ಪುರದಾಳು ಗ್ರಾಮದ ದಿ.ಗುಮ್ಮನಬೈಲು ಸಿದ್ದಪ್ಪ ಹಾಗೂ ಕಿಡದುಂಬೆ ವಿಶ್ವನಾಥ್ ಮತ್ತು ಹುಣಸೇಮಕ್ಕಿ ಅಣ್ಣಪ್ಪ, ಗಂಟೆಮನೆ ಮೂರ್ತಿ ಎಂಬವರ ತೋಟಗಳಿಗೆ ನುಗ್ಗಿರುವ ಒಂಟಿ ಸಲಗ, ಹಲವು ಅಡಿಕೆ ಮರಗಳನ್ನು ನಾಶ ಮಾಡಿದೆ.

ದಿ.ಸಿದ್ದಪ್ಪನವರಿಗೆ ಸೇರಿದ ತೋಟದಲ್ಲಿ 20ಕ್ಕೂ ಅಧಿಕ ಅಡಿಕೆ ಮರ ಹಾಗೂ ತೆಂಗಿನಮರ, ಅಣ್ಣಪ್ಪರ ತೋಟದಲ್ಲಿ 12ಕ್ಕೂ ಹೆಚ್ಚು ಅಡಿಕೆ ಮರ, ಮೂರ್ತಿಯವರ ತೋಟದಲ್ಲಿ 5ಕ್ಕೂ ಅಧಿಕ ಅಡಿಕೆ ಮರ ಹಾಗೂ ವಿಶ್ವನಾಥ್ ಅವರ ತೋಟದಲ್ಲಿ 10ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಮುರಿದು ಹಾಕಿದೆ.

ಅರಣ್ಯ ಇಲಾಖೆ ವಿರುದ್ಧ ಆಕ್ರೋಶ:

ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.

ಈ ಹಿಂದೆ ಡಿಸಿಎಫ್ ಕಚೇರಿ ಎದುರು ಧರಣಿ ನಡೆಸಿ ಕಾಡಾನೆ ಹಾವಳಿಗೆ ಕಡಿವಾಣ ಹಾಕುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆಯವರು ಕೂಡಲೇ ಕಾಡಾನೆ ಉಪಟಳಕ್ಕೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದ್ದಾರೆ.

Tags

shivamoggawild elephant attack
share
ವಾರ್ತಾಭಾರತಿ
ವಾರ್ತಾಭಾರತಿ
Next Story
X