Shivamogga | ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ : ನಗರದ ಸಾಗರ ರಸ್ತೆಯಲ್ಲಿರುವ ಖಾಸಗಿ ವಸತಿಗೃಹವೊಂದರಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬರು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಗೀತಾ (48) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಬೆಂಕಿಯಿಂದ ಶೇ.70ರಷ್ಟು ಸುಟ್ಟಿರುವ ಗೀತಾರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ.
ಪರಿಚಿತ ವ್ಯಕ್ತಿಯೊಂದಿಗೆ ಬಂದು ಲಾಡ್ಜ್ ನಲ್ಲಿ ತಂಗಿದ್ದ ಗೀತಾ, ಜಗಳದಿಂದ ಬೇಸತ್ತು ಆತ್ಮಹತ್ಯೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.ಆಕೆಯೊಂದಿಗೆ ಇದ್ದ ವ್ಯಕ್ತಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ
Next Story





