Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಎಸ್‌ಐಆರ್ ಜಾಗೃತಿ ಕುರಿತು...

ಎಸ್‌ಐಆರ್ ಜಾಗೃತಿ ಕುರಿತು ಶಿವಮೊಗ್ಗದಲ್ಲಿ ಬಹಿರಂಗ ಸಭೆ

ವಾರ್ತಾಭಾರತಿವಾರ್ತಾಭಾರತಿ30 Jun 2026 12:14 AM IST
share
ಎಸ್‌ಐಆರ್ ಜಾಗೃತಿ ಕುರಿತು ಶಿವಮೊಗ್ಗದಲ್ಲಿ ಬಹಿರಂಗ ಸಭೆ
ಕೇಂದ್ರದ ಬಿಜೆಪಿ ಸರಕಾರದ ದುರುದ್ದೇಶ ತಡೆಯಬೇಕಿದೆ : ಮಧುಬಂಗಾರಪ್ಪ

ಶಿವಮೊಗ್ಗ : ಕೇಂದ್ರದ ಬಿಜೆಪಿ ಸರಕಾರವು ದೇಶದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ದುರುದ್ದೇಶದಿಂದಲೇ ಜಾರಿಗೆ ತಂದಿದೆ. ಆದರೆ ಜಿಲ್ಲೆಯ ಜನರಲ್ಲಿ ಇದರ ಜಾಗೃತಿ ಮೂಡಿಸಿ ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳುವಂತೆ ಮಾಡುವಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕರೆ ನೀಡಿದೆ.

ಮತದಾರರ ಪಟ್ಟಿಯ ತೀವ್ರ ವಿಶೇಷ ಪರಿಷ್ಕರಣೆ ಕಾರ್ಯಕ್ರಮವು ಜೂ.30ರಿಂದ ಶುರುವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ಸೋಮವಾರ ಎಸ್‌ಐಆರ್ ಜಾಗೃತಿ ಕುರಿತು ಬಹಿರಂಗ ಸಭೆ ನಡೆಸಲಾಯಿತು.

ಮಾಜಿ ಸಚಿವ ಮಧು ಬಂಗಾರಪ್ಪ ಸಭೆಯನ್ನುದ್ದೇಶಿಸಿ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಯೂ ಇಲ್ಲಿ ಮತದಾನದ ಹಕ್ಕು ಪಡೆದಿರುವುದು ಬಿಜೆಪಿ ಸರಕಾರದಿಂದ ಅಲ್ಲ, ಅದು ಸಿಕ್ಕಿದ್ದು ಸಂವಿಧಾನದ ಮೂಲಕ. ಹಾಗಾಗಿ ನಮಗೆ ಸಂವಿಧಾನವೇ ದೇವರು. ಆ ಮೂಲಕವೇ ನಾವು ನಮ್ಮ ಹಕ್ಕನ್ನು ಉಳಿಸಿಕೊಳ್ಳಬೇಕಿದೆ. ಕೇಂದ್ರದ ಬಿಜೆಪಿ ಸರಕಾರದ ದುರುದ್ದೇಶವನ್ನು ಆ ಮೂಲಕವೇ ತಡೆಯಬೇಕಿದೆ ಎಂದರು.

ನಾಳೆಯಿಂದಲೇ ನಾವು ನಮ್ಮ ಕರ್ತವ್ಯಗಳಲ್ಲಿ ತೊಡಗಿಸಿಕೊಳ್ಳಬೇಕಿದೆ.ಸಂವಿಧಾನ ಪ್ರಕಾರ ನಾವು ಏನು ಮಾಡಬೇಕೋ ಅದನ್ನು ಮಾಡೋಣ, ಎಲ್ಲದ್ದಕ್ಕೂ ಉತ್ತರ ಇರುತ್ತದೆ. ನಿವಾಸಿ ದೃಢೀಕರಣ ಸಮಸ್ಯೆ ಇದ್ದಲ್ಲಿ ನಾವೇ ಮುಂದೆ ನಿಂತು ಮಾಡಿಸೋಣ, ಒಟ್ಟಾರೆ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಇರುವಂತೆ ನೋಡಿಕೊಳ್ಳೋಣ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಮುಖಂಡರಾದ ಆಯನೂರು ಮಂಜುನಾಥ್, ಎನ್. ರಮೇಶ್, ಎಚ್.ಎಸ್. ಸುಂದರೇಶ್, ಎಚ್.ಸಿ. ಯೋಗೇಶ್, ಕಲಗೋಡು ರತ್ನಾಕರ, ಬಿ.ಎಸ್. ಗಣೇಶ್, ಇಸ್ಮಾಯಿಲ್ ಖಾನ್, ಜಿ. ಪಲ್ಲವಿ, ಎಂ. ಶ್ರೀಕಾಂತ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ.ಗೌಡ ಮಾತನಾಡಿ, ಕೇಂದ್ರದ ದುರುದ್ದೇಶ ಪೂರ್ವಕ ಎಸ್‌ಐಆರ್ ಬಗ್ಗೆ ಜಾಗೃತಿ ಅಗತ್ಯವಿದೆ. ಆ ನಿಟ್ಟಿನಲ್ಲಿಯೇ ಪಕ್ಷದ ಕಾರ್ಯಕರ್ತರು ಮತದಾರರಿಗೆ ಸರಿಯಾದ ಮಾಹಿತಿ ನೀಡಿ ಮತದಾನದ ಹಕ್ಕು ಪಡೆಯುವಂತೆ ಮಾಡಬೇಕೆಂದು ಮನವಿ ಮಾಡಿದರು.

ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಜಿ. ಚಂದ್ರಶೇಖರ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಶ್ವೇತಾ ಬಂಡಿ, ಮುಖಂಡರಾದ ಎಸ್.ಪಿ. ಶೇಷಾದ್ರಿ, ಎಸ್.ರವಿಕುಮಾರ್, ಕೆಂಚೇನಹಳ್ಳಿ ಕುಮಾರ್, ವೇದಾ ವಿಜಯ್ ಕುಮಾರ್, ನಯಾಝ್ ಅಹ್ಮದ್, ಶ್ರೀನಿವಾಸ್ ಕರಿಯಣ್ಣ, ಶರತ್ ಮರಿಯಪ್ಪ, ಆರ್.ರಾಜಶೇಖರ್ ಮತ್ತಿತರರು ಇದ್ದರು

Tags

SIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X