ಎಸೆಸೆಲ್ಸಿ ಪರೀಕ್ಷೆ-2 | ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದ ಶಿವಮೊಗ್ಗದ ಸಂಜನಾ

ಸಂಜನಾ.ಎಸ್
ಶಿವಮೊಗ್ಗ: ಎಸೆಸೆಲ್ಸಿ ಪರೀಕ್ಷೆ-2ರ ಫಲಿತಾಂಶವು ಶುಕ್ರವಾರದಂದು ಪ್ರಕಟವಾಗಿದ್ದು, ಹಿಂದಿನ ಫಲಿತಾಂಶದ ವೇಳೆ ಕೇವಲ ಒಂದು ಅಂಕದಿಂದ ಎಸೆಸೆಲ್ಸಿಯಲ್ಲಿ ಗರಿಷ್ಠ ಅಂಕ ಗಳಿಸುವ ಅವಕಾಶ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿನಿ, ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625ಕ್ಕೆ ಗಳಿಸಿ ಸಾಧನೆ ಮಾಡಿದ್ದಾರೆ.
ಈ ಹಿಂದಿನ ಫಲಿತಾಂಶದ ವೇಳೆ ಶಿವಮೊಗ್ಗದ ಆದಿಚುಂಚನಗಿರಿ ಪ್ರೌಢ ಶಾಲೆಯ ಸಂಜನಾ.ಎಸ್ 624 ಅಂಕ ಪಡೆದಿದ್ದರು. ವಿಜ್ಞಾನ ವಿಷಯದಲ್ಲಿ ಒಂದು ಅಂಕ ಕಡಿತವಾಗಿತ್ತು.
ಒಂದು ಅಂಕದಿಂದ ರಾಜ್ಯಕ್ಕೆ ಟಾಪರ್ ಆಗುವ ಅವಕಾಶದಿಂದ ವಂಚಿತರಾಗಿದ್ದ ಸಂಜನಾ ಮತ್ತೆ ವಿಜ್ಞಾನ ವಿಷಯ ಪರೀಕ್ಷೆ ಬರೆದು 80ಕ್ಕೆ 80 ಅಂಕ ಪಡೆದಿದ್ದಾರೆ. ಈ ಮೂಲಕ 625ಕ್ಕೆ 625ಕ್ಕೆ ಅಂಕ ಪಡೆದ ಸಾಧನೆ ಮಾಡಿದ್ದಾರೆ.
ಸಂಜನಾ ತಂದೆ ಸುರೇಶ್.ಎಂ ಪೊಲೀಸ್ ಇಲಾಖೆಯಲ್ಲಿ ಎಸ್ಎಸ್ಐ ಆಗಿ ಕೆಲಸ ಮಾಡುತ್ತಿದ್ದು, ತಾಯಿ ರೇಖಾ.ಎಸ್ ಗೃಹಿಣಿಯಾಗಿದ್ದಾರೆ.
Next Story





