Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಕನ್ನಡ ಸಂಸ್ಕೃತಿ ಮತ್ತು ಅಂಬೇಡ್ಕರ್...

ಕನ್ನಡ ಸಂಸ್ಕೃತಿ ಮತ್ತು ಅಂಬೇಡ್ಕರ್ ಚಿಂತನೆಗಳು : ಅನುಸಂಧಾನ|ಕುವೆಂಪು ವಿವಿಯಲ್ಲಿ ರಾಜ್ಯಮಟ್ಟದ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ1 Oct 2025 2:33 PM IST
share
ಕನ್ನಡ ಸಂಸ್ಕೃತಿ ಮತ್ತು ಅಂಬೇಡ್ಕರ್ ಚಿಂತನೆಗಳು : ಅನುಸಂಧಾನ|ಕುವೆಂಪು ವಿವಿಯಲ್ಲಿ ರಾಜ್ಯಮಟ್ಟದ ಕಾರ್ಯಾಗಾರ
ಅಂಬೇಡ್ಕರ್ ಓದು; ಭಾರತವನ್ನು ಅರಿಯುವ ದಾರಿ: ಕೋಟಿಗಾನಹಳ್ಳಿ ರಾಮಯ್ಯ

ಶಂಕರಘಟ್ಟ : ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು, ಭಾರತೀಯತೆಯನ್ನು ಅರ್ಥೈಸುವುದು ಆಗಿದೆ ಎಂದು ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಸಂಸ್ಥೆ ಹಾಗೂ ಕುವೆಂಪು ವಿವಿ ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆಗಳ ಸಹಯೋಗದಲ್ಲಿ ಈಚೆಗೆ ನಡೆದ "ಕನ್ನಡ ಸಂಸ್ಕೃತಿ ಮತ್ತು ಅಂಬೇಡ್ಕರ್ ಚಿಂತನೆಗಳು : ಅನುಸಂಧಾನ" ಕುರಿತ ಎರಡು ದಿನಗಳ ರಾಜ್ಯಮಟ್ಟದ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರನ್ನು ಸರಳವಾಗಿ ಓದುವುದರಿಂದ, ಭಜನೆ ಮಾಡುವುದರಿಂದ ಪ್ರಯೋಜನವಿಲ್ಲ. ಸಂಕೀರ್ಣವಾಗಿ ಓದುವುದರ ಮೂಲಕ ಈ ಸಮಾಜವನ್ನು ಅರಿಯುವ ಪ್ರಯತ್ನ ಮಾಡಬೇಕು. ಇದು ಅಂಬೇಡ್ಕರ್ ಅವರನ್ನು ಅಪವ್ಯಾಖ್ಯಾನ ಮಾಡುತ್ತಿರುವ ಕಾಲವಾಗಿದೆ. ಅಂಬೇಡ್ಕರ್ ಚಿಂತನೆಗಳನ್ನು ವಿರೋಧಿಸುತ್ತಿದ್ದವರೂ ಕೂಡ ಇಂದು ಅಂಬೇಡ್ಕರ್ ಅವರನ್ನು ಆರಾಧಿಸಲು ಶುರು ಮಾಡಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್ ಅನುಯಾಯಿಗಳು ಆರಾಧನೆ ಮಟ್ಟಕ್ಕೆ ಇಳಿಸಿದ್ದಾರೆ. ಅಂಬೇಡ್ಕರ್ ಅವರ ಬರಹಗಳಲ್ಲಿರುವ ವೈಚಾರಿಕತೆಯ ಜೀವ ತೆಗೆದು ಅವರ ವಿಚಾರಗಳನ್ನು ಮಂಡಿಸಲಾಗುತ್ತಿದೆ. ಅವರಿಗೆ ಸಂಬಂಧಿಸಿದ ಜಾಗಗಳನ್ನು ಯಾತ್ರಾಸ್ಥಳಗಳನ್ನಾಗಿ ಮಾಡಲಾಗುತ್ತಿದೆ. ಹೀಗೆ ನಿಜ ಅಂಬೇಡ್ಕರ್ ರನ್ನು ಮರೆಮಾಚಲಾಗುತ್ತಿದೆ ಎಂದು ತಿಳಿಸಿದರು.

ಎಂಥ ಅಪವ್ಯಾಖ್ಯಾನಗಳ ನಡುವೆಯೂ ಕಳೆದ ಇಪ್ಪತ್ತು ವರ್ಷಗಳಲ್ಲಿ ಅಂಬೇಡ್ಕರ್ ಅವರನ್ನು ನಿಜ ಅರ್ಥದಲ್ಲಿ ಅರಿಯುವ ಪ್ರಯತ್ನ ಮಾಡಲಾಗುತ್ತಿದೆ. ಪ್ರಪಂಚದ ಬೇರೆ ಬೇರೆ ದೇಶಗಳ ಹೋರಾಟಗಳಿಗೆ ಅಂಬೇಡ್ಕರ್ ಸ್ಪೂರ್ತಿಯಾಗಿದ್ದಾರೆ. ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಅಂಬೇಡ್ಕರ್ ಅಧ್ಯಯನ ಕೇಂದ್ರಗಳನ್ನು ತೆರೆಯಲಾಗಿದೆ. ಅಂಬೇಡ್ಕರ್ ಅವರ ಚಿಂತನೆಯನ್ನು ಮೂವತ್ತಕ್ಕೂ ಹೆಚ್ಚು ಜ್ಞಾನಶಿಸ್ತುಗಳನ್ನು ಅನ್ವಯಿಸಿ ಅರ್ಥೈಸಬಹುದಾಗಿದೆ. ಅಂಬೇಡ್ಕರ್ ಚಿಂತನೆಗಳನ್ನು ವರ್ತಮಾನಕ್ಕೆ ಅನ್ವಯಿಸಿ ನುಡಿಗಟ್ಟುಗಳ ಮೂಲಕ ಓದಿಕೊಳ್ಳಬೇಕು. ಇದರಿಂದ ಮಾತ್ರ ಅಂಬೇಡ್ಕರ್ ಜ್ಞಾನವನ್ನು ಸಮಾಜ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮಾತನಾಡಿದರು. ಅಂಬೇಡ್ಕರ್ ವಾದ ಅಪಮೌಲ್ಯಗೊಂಡಿರುವ ಈ ಸಂದರ್ಭದಲ್ಲಿ ಅದನ್ನು ಮರುಪರಿಶೀಲನೆಗೆ ಒಳಪಡಿಸಬೇಕು. ಮಾರ್ಕ್ಸ್ ವಾದ ಹೇಗೆ ಮಾರ್ಕ್ಸ್ ನನ್ನು ದಾಟಿ ವಿವಿಧ ಆಯಾಮಗಳಿಂದ ಬೆಳೆಯುತ್ತಿದೆಯೋ ಹಾಗೆ ಅಂಬೇಡ್ಕರ್ ವಾದ ಕೂಡ ವ್ಯಕ್ತಿ ನೆಲೆಯಿಂದ ದಾಟಿ ಸಮುದಾಯಿಕ ನೆಲೆಗೆ ರೂಪಾಂತರಗೊಂಡು ಬೆಳೆಯಬೇಕಿದೆ. ಅದನ್ನು ಭಿನ್ನ ರೂಪಗಳಲ್ಲಿ ಮರು ವ್ಯಾಖ್ಯಾನ ಮಾಡಬೇಕಿದೆ.

ಇಂದು ಅಂಬೇಡ್ಕರ್ ಚಿಂತನೆಗಳ ನಿಜ ಅರ್ಥವನ್ನು ಪಡೆಯುವಲ್ಲಿ ನಾವು ಸೋತಿದ್ದೇವೆ. ವಿದ್ಯಾರ್ಥಿಗಳು ಅಂಬೇಡ್ಕರ್ ಅವರನ್ನು ಓದಲು ಗಂಭೀರವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಿಬಿರದ ನಿರ್ದೇಶಕ ಸಿ.ಜಿ. ಲಕ್ಷ್ಮೀಪತಿ, ಕನ್ನಡ ಅಧ್ಯಾಪಕರ ವೇದಿಕೆಯ ಅಧ್ಯಕ್ಷರಾದ ಡಾ. ಸಬಿತಾ ಬನ್ನಾಡಿ, ಉಪಾಧ್ಯಕ್ಷರಾದ ಡಾ. ಕುಂಸಿ ಉಮೇಶ್, ಅಂಬೇಡ್ಕರ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್, ಕುವೆಂಪು ವಿವಿ ಹಣಕಾಸು ಅಧಿಕಾರಿ ಡಾ. ಎಚ್.ಎನ್. ರಮೇಶ್, ಯುಗಧರ್ಮ ರಾಮಣ್ಣ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X