Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. Thirthahalli | ಸುರಳಿ ಬಾಳೇಬೈಲಿನಲ್ಲಿ...

Thirthahalli | ಸುರಳಿ ಬಾಳೇಬೈಲಿನಲ್ಲಿ 81 ಮತದಾರರ ಹೆಸರು ತೆಗೆಯಲು ಬಿಜೆಪಿ ಕಾರ್ಯಕರ್ತನಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ7 Oct 2026 11:01 PM IST
share
Thirthahalli | ಸುರಳಿ ಬಾಳೇಬೈಲಿನಲ್ಲಿ 81 ಮತದಾರರ ಹೆಸರು ತೆಗೆಯಲು ಬಿಜೆಪಿ ಕಾರ್ಯಕರ್ತನಿಂದ ಮನವಿ

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಸಮೀಪದ ಸುರಳಿ ಬಾಳೇಬೈಲು ಗ್ರಾಮದ 186 ಭಾಗದ ಮತದಾರರ ಕರಡು ಪಟ್ಟಿಯಲ್ಲಿ ಅನಿವಾಸಿಗಳನ್ನು ಸೇರಿಸಲಾಗಿದೆ. ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬೇಕು ಎಂದು ಇಂದಿರಾ ನಗರದ ಬಿಜೆಪಿ ಕಾರ್ಯಕರ್ತ ಸತೀಶ್ ಎಂಬಾತ ತೀರ್ಥಹಳ್ಳಿಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ ಘಟನೆ ವರದಿಯಾಗಿದೆ.

ಸತೀಶ್ ಸಲ್ಲಿಸಿರುವ ಒಟ್ಟು 81 ಮತದಾರರ ಪಟ್ಟಿಯಲ್ಲಿ ಕೇವಲ 3 ಹಿಂದೂಗಳನ್ನು ಹೊರತುಪಡಿಸಿ ಉಳಿದವರೆಲ್ಲರೂ ಮುಸ್ಲಿಮ್ ಸಮುದಾಯಕ್ಕೆ ಸೇರಿರುವುದು ಇದರ ಹಿಂದೆ ದುರುದ್ದೇಶ ಇದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಹೆಸರಿನ ಸೇರ್ಪಡೆ ಅಥವಾ ಅಳಿಸುವಿಕೆಗೆ ಆಕ್ಷೇಪ ಸಲ್ಲಿಸಲು ಫಾರಂ-7 ಬಳಸಲಾಗುತ್ತದೆ. ಆದರೆ, ಸುರಳಿ ಬಾಳೇಬೈಲು ಘಟನೆ ಭಿನ್ನವಾಗಿದೆ.

ತೀರ್ಥಹಳ್ಳಿ ನಿವಾಸಿ ಫಾರೂಕ್ ಎಂಬವರು ನೀಡಿರುವ ಮಾಹಿತಿಯ ಪ್ರಕಾರ, ಪಟ್ಟಿಯಲ್ಲಿ ಹೆಸರುಗಳನ್ನು ಉಲ್ಲೇಖಿಸಿರುವ ಎಲ್ಲರೂ ಜೀವಂತವಾಗಿದ್ದಾರೆ ಮತ್ತು ಅದೇ ಪ್ರದೇಶದಲ್ಲೇ ವಾಸಿಸುತ್ತಿದ್ದಾರೆ. ಕೆಲವರು ಸಮೀಪದ ಗ್ರಾಮಗಳಿಗೆ ಸ್ಥಳಾಂತರಗೊಂಡು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರೂ, ಅವರು ಪ್ರದೇಶದಿಂದ ಸಂಪೂರ್ಣವಾಗಿ ಹೊರ ಹೋಗಿಲ್ಲ ಎಂದು ತಿಳಿಸಿದ್ದಾರೆ.

ತಮ್ಮ ಹೆಸರುಗಳನ್ನು ಅಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂಬ ವಿಚಾರವೂ ಪಟ್ಟಿಯಲ್ಲಿರುವ ನಿವಾಸಿಗಳಿಗೆ ಆರಂಭದಲ್ಲಿ ತಿಳಿದಿರಲಿಲ್ಲ ಎನ್ನಲಾಗಿದೆ. ಗ್ರಾಪಂ ಸದಸ್ಯರೊಬ್ಬರಿಗೆ ಈ ವಿಚಾರ ತಿಳಿದು, ವಿಚಾರಣೆ ನಡೆಯುತ್ತಿರುವ ಬಗ್ಗೆ ನಿವಾಸಿಗಳಿಗೆ ಮಾಹಿತಿ ದೊರೆತ ಬಳಿಕವೇ ಅವರು ಈ ವಿಷಯವನ್ನು ಅರಿತುಕೊಂಡಿದ್ದಾರೆ ಎಂದು ಫಾರೂಕ್ ಮಾಹಿತಿ ನೀಡಿದ್ದಾರೆ.

ಪ್ರಕರಣ ಬೆಳಕಿಗೆ ಬಂದ ಬಳಿಕ ಸ್ಥಳೀಯ ಚುನಾವಣಾ ನೋಂದಣಿ ಅಧಿಕಾರಿ, ಪಟ್ಟಿಯಲ್ಲಿನ ಮತದಾರರಿಗೆ ಅನ್ಯಾಯವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಪಟ್ಟಿಯಿಂದ ಯಾರ ಹೆಸರನ್ನೂ ಈವರೆಗೆ ಕೈಬಿಟ್ಟಿಲ್ಲ. ಅವರ ವಾಸದ ವರದಿ ಪಡೆಯಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ.

ವಾಸ್ತವ ಪರಿಶೀಲಿಸಿ ಎಫ್‌ಐಆರ್ ದಾಖಲಿಸಿ :

ಅರ್ಹ ಮತದಾರರರನ್ನು ಉಲ್ಲೇಖಿಸಿ ‘ಮತದಾರರು ವಾಸವಿಲ್ಲ’ ಎಂದು ಪಟ್ಟಿ ನೀಡಿದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ ಎಂದು ಹೇಳಲಾಗಿರುವ ಈತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ತಪ್ಪು ಮಾಹಿತಿ ನೀಡಲು ಕಾರಣವೇನು. ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎನ್ನುವುದು ಆತನ ಮೇಲೆ ಎಫ್‌ಐಆರ್ ದಾಖಲಿಸಿ ತನಿಖೆ ಮೂಲಕ ತಿಳಿದುಕೊಳ್ಳಬೇಕೆಂದು ಸುರಳಿ ಬಾಳೇಬೈಲು ನಿವಾಸಿಗಳು ಆಗ್ರಹಿಸಿದ್ದಾರೆ.

ಸೂಕ್ತ ತನಿಖೆಗೆ ಡಿಸಿಗೆ ದೂರು: ಯೋಗೇಶ್

ಶಿವಮೊಗ್ಗ : ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು 73 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಚುನಾವಣಾಧಿಕಾರಿ(ತಹಶೀಲ್ದಾರ್)ಗೆ ದೂರು ನೀಡಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ದೂರು ನೀಡಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಸಿ.ಯೋಗೇಶ್ ಹೇಳಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಎನ್ಯುಮರೇಷನ್ ಫಾರಂ ಪಡೆದಿರುವ 73 ಮತದಾರರ ಹೆಸರುಗಳನ್ನು ಫಾರಂ-7ರ ಮೂಲಕ ಕೈಬಿಡಲು ಮುಂದಾಗಿರುವ ಕುರಿತು ದೂರು ನೀಡಲಾಗಿದೆ. ಮತದಾರರ ಪಟ್ಟಿಯಿಂದ ಯಾರ ಹೆಸರನ್ನೂ ಅನ್ಯಾಯವಾಗಿ ಕೈಬಿಡಬಾರದು. ಈ ಪ್ರಕರಣದಲ್ಲಿ ಹೆಸರುಗಳನ್ನು ಕೈಬಿಡಲು ಕಾರಣವೇನು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು. ಅಧಿಕಾರಿಗಳಿಂದಾಗಲಿ ಅಥವಾ ಯಾವುದೇ ರಾಜಕೀಯ ಪಕ್ಷದವರಿಂದಾಗಲಿ ತಪ್ಪಾಗಿದ್ದರೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಅರ್ಹ ಮತದಾರರ ಮತದಾನದ ಹಕ್ಕು ಕಸಿಯುವ ಪ್ರಯತ್ನಕ್ಕೆ ಅವಕಾಶ ನೀಡಬಾರದು ಎಂದರು.

Tags

Thirthahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X