Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ...

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಆತ್ಮಹತ್ಯೆ, ಸಾವಿನ ಭಾಗ್ಯವನ್ನೇ ನೀಡುತ್ತಿದೆ : ವಿಜಯೇಂದ್ರ

"ಮೃತಪಟ್ಟಿರುವ ಬಾಣಂತಿಯರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿ"

ವಾರ್ತಾಭಾರತಿವಾರ್ತಾಭಾರತಿ4 Jan 2025 6:33 PM IST
share
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಆತ್ಮಹತ್ಯೆ, ಸಾವಿನ ಭಾಗ್ಯವನ್ನೇ ನೀಡುತ್ತಿದೆ : ವಿಜಯೇಂದ್ರ

ಶಿವಮೊಗ್ಗ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಆತ್ಮಹತ್ಯೆ ಮತ್ತು ಸಾವಿನ ಭಾಗ್ಯವನ್ನೇ ನೀಡುತ್ತಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರು ಹಾಗೂ ಶಿಶುಗಳ ಮರಣ ಖಂಡಿಸಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಮೊಗ್ಗದ ಚಂದ್ರಶೇಖರ್, ಕಾಂಗ್ರೆಸ್ ಶಾಸಕನ ಪುತ್ರನ ಕಿರುಕುಳದಿಂದ ಪಿಎಸ್‌ಐ ಪರಶುರಾಮ್, ಬೆಳಗಾವಿ ಸಚಿವರ ಪಿಎ ಕಿರುಕುಳದಿಂದ ಅಲ್ಲಿನ ತಹಶೀಲ್ದಾರ್ ಕಚೇರಿಯ ಎಸ್‌ಡಿಎ, ಗುಲ್ಬರ್ಗಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬಲಗೈ ಬಂಟನ ಕಿರುಕುಳದಿಂದ ಸಚಿನ್ ಪಾಂಚಾಳ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇದರ ಜೊತೆಗೆ ಬಾಣಂತಿಯರ ಸರಣಿ ಸಾವು ರಾಜ್ಯದಲ್ಲಿ ಸಂಭವಿಸಿದೆ. ಸರಕಾರದ ದಿವ್ಯ ನಿರ್ಲಕ್ಷದಿಂದಾಗಿ ಈ ಸಾವುಗಳು ಸಂಭವಿಸಿದೆ. ಇಷ್ಟಕ್ಕೂ ನಿಲ್ಲದೇ ಸಾವಿರಕ್ಕೂ ಅಧಿಕ ನವಜಾತ ಶಿಶುಗಳ ಸಾವು ಕೂಡ ಆಗಿದೆ. ಸರಕಾರದಲ್ಲಿ ಯಾರಿಗೂ ಕಿಂಚಿತ್ ಜವಾಬ್ದಾರಿ ಇಲ್ಲ. ಇದೊಂದು ಲಜ್ಜೆಗಟ್ಟ ಸರಕಾರ. ಈ ಪ್ರಮಾಣದ ಸಾವುಗಳನ್ನು ಹಿಂದಿನ ಯಾವುದೇ ಸರಕಾದಲ್ಲಿ ಜನರು ನೋಡಿರಲಿಲ್ಲ. ಈ ಸರಕಾರಕ್ಕೆ ಕಂದಮ್ಮಗಳ ಹಾಗೂ ಬಾಣಂತಿಯರ ಶಾಪ ತಟ್ಟುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಧಿಕಾರದ ಅಮಲಿನಲ್ಲಿ ಇರುವ ದುಷ್ಟ ಸರಕಾರ ಇದು. ಅತ್ಯಂತ ಭಂಡ ಸರಕಾರವನ್ನು ಜನರು ನೋಡುತ್ತಿದ್ದಾರೆ. ಕೂಡಲೇ ಮೃತಪಟ್ಟಿರುವ ಬಾಣಂತಿಯರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಬೇಕು. ಅನಾಥವಾಗಿರುವ ಕಂದಮ್ಮಗಳನ್ನು ಸರಕಾರವೇ ದತ್ತು ತೆಗೆದುಕೊಂಡು ಶಿಕ್ಷಣ ಮತ್ತು ಆರೋಗ್ಯ ಸೌಲಭವನ್ನು ಉಚಿತವಾಗಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧಕ್ಷ ಟಿ.ಡಿ.ಮೇಘರಾಜ್, ಮಹಿಳಾಮೋರ್ಚಾ ಜಿಲಾಧ್ಯಕ್ಷೆ ಗಾಯತ್ರಿದೇವಿ ಮಲ್ಲಪ್ಪ, ಪ್ರಮುಖರಾದ ಕೆ.ಜಿ.ಕುಮಾರಸ್ವಾಮಿ, ಎಸ್.ದತ್ತಾತ್ರಿ, ಮಾಲತೇಶ್, ಸುರೇಖಾ ಮುರುಳೀದರ, ಡಾ.ಶ್ರೀನಿವಾರ ರೆಡ್ಡಿ, ಹರಿಕೃಷ್ಣ ಇನ್ನಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X